ಮೈಸೂರು: ನಾಡಹಬ್ಬ ದಸರಾಗೆ ದಿನಗಣನೆ ಶುರುವಾಗಿದೆ. ಹೀಗಾಗಿ ದಸರಾ ಗಜಪಡೆಯ ತಾಲೀಮು ಕೂಡ ಮೈಸೂರಿನಲ್ಲಿ ಆರಂಭವಾಗಿದೆ. ಮೈಸೂರು ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಕ್ಯಾಪ್ಟನ್ ಅರ್ಜುನ ನೇತೃತ್ವದ ಗಜಪಡೆ ತಾಲೀಮು ಆರಂಭಿಸಿದೆ.
ಮೈಸೂರಿನ ಒಳಗೆ ಇನ್ನು 40 ದಿನ ಗಜಪಡೆಯೂ ವಾಕಿಂಗ್ ಮಾಡುತ್ತದೆ. ದಸರಾ ತಾಲೀಮು ರೂಪದ ವಾಕಿಂಗ್ ಅನ್ನು ಗಜಪಡೆಯೂ ಬೆಳಗ್ಗೆ ಮತ್ತು ಸಂಜೆ ಮಾಡಲಿವೆ. ಕ್ಯಾಪ್ಟನ್ ಅರ್ಜುನ ನೇತೃತ್ವದ ಗಜಪಡೆಯ ವಾಕಿಂಗ್ ಪ್ರತಿದಿನ ಅರಮನೆಯ ಆವರಣದಿಂದ ಆರಂಭವಾಗಲಿದೆ. ಇದನ್ನೂ ಓದಿ: ರಾಜಬೀದಿಯಲ್ಲಿ ತಾಲೀಮು ಆರಂಭ: ದಸರಾ ಆನೆಗಳ ತೂಕ 1 ವರ್ಷದ ಹಿಂದೆ ಎಷ್ಟಿತ್ತು? ಈಗ ಎಷ್ಟಾಗಿದೆ?
ದಸರಾ ಮೆರವಣಿಗೆ ಸಾಗುವ ಚಾಮರಾಜ ವೃತ್ತ, ಕೆ.ಆರ್. ವೃತ್ತ, ಸಯ್ಯಾಜಿರಾವ್ ರಸ್ತೆ ಮೂಲಕ ಹೈವೆ ವೃತ್ತದವರೆಗೆ ಇಂದು ಐದು ಕಿ.ಮೀ. ವಾಕಿಂಗ್ ಮಾಡಿದವು. ಕ್ಯಾಪ್ಟನ್ ಅರ್ಜುನ ಹಿಂದೆ ಧನಂಜಯ, ವಿಕ್ರಮ, ಗೋಪಿ, ಚೈತ್ರಾ, ವರಲಕ್ಷ್ಮಿ ಆನೆಗಳು ಹೆಜ್ಜೆ ಹಾಕಿದವು.

ಆನೆಗಳಿಗೆ ಜನರ ಗದ್ದಲ, ವಾಹನಗಳ ಧ್ವನಿ ಮತ್ತು ರಸ್ತೆಯ ಪರಿಚಯ ಮಾಡುವ ಉದ್ದೇಶದಿಂದ ಈ ತಾಲೀಮು ಮಾಡಿಸಲಾಗುತ್ತದೆ. ಅಲ್ಲದೆ ಕಾಡಿನಲ್ಲಿ ಓಡಾಡುವ ಆನೆಗಳು ಸಿಮೆಂಟ್ ಹಾಗೂ ಕಾಂಕ್ರಿಟ್ ರಸ್ತೆ ಮೇಲೆ ನಡೆಯುವುದನ್ನು ಅಭ್ಯಾಸ ಮಾಡಿಸುವುದು ಈ ತಾಲೀಮಿನ ಉದ್ದೇಶವಾಗಿದೆ. ತಾಲೀಮು ಮುಗಿದ ನಂತರ ಆನೆಗಳಿಗೆ ಪೌಷ್ಠಿಕ ಆಹಾರ ನೀಡಿ ಅವು ಸದೃಢವಾಗಿರುವಂತೆ ನೋಡಿಕೊಳ್ಳಲಾಗುತ್ತದೆ. ಯಾವುದೇ ಹಂತದಲ್ಲೂ ಆನೆಗಳು ಸಿಮೆಂಟ್ ಹಾಗೂ ಕಾಂಕ್ರಿಟ್ ರಸ್ತೆ ಮೇಲೆ ಸಾಗಿ ಸುಸ್ತಾಗದಂತೆ ನೋಡಿಕೊಳ್ಳುವುದು ಅತಿ ಮುಖ್ಯವಾಗಿದೆ ಎಂದು ಆನೆ ವೈದ್ಯರಾದ ಡಾ. ನಾಗರಾಜ್ ಹೇಳಿದ್ದಾರೆ.

ಆನೆಗಳ ವಾಕಿಂಗ್ ಕಂಡ ಜನರು ಸಾಮಾನ್ಯವಾಗಿ ಪುಳಕಿತಗೊಂಡಿದ್ದು, ಆನೆಗಳ ಫೋಟೋ ಮತ್ತು ಸೆಲ್ಫಿ ತೆಗೆದುಕೊಳ್ಳುತ್ತಾ ಆನೆಗಳ ವಾಕಿಂಗ್ ನೋಡಿ ಜನರು ಎಂಜಾಯ್ ಮಾಡಿದ್ದಾರೆ. ದಸರಾವರೆಗೂ ಈ ವಾಕಿಂಗ್ ಮೈಸೂರಲ್ಲಿ ನಡೆಯಲಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
https://www.youtube.com/watch?v=cziWRBz4mkg

Leave a Reply