ವಿಷ ಸೇವಿಸಿರುವ ಶಂಕೆ – ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಆಸ್ಪತ್ರೆಗೆ ದಾಖಲು

ಇಸ್ಲಾಮಾಬಾದ್: ತಲೆಮರೆಸಿಕೊಂಡಿದ್ದ ಮುಂಬೈ ಸರಣಿ ಸ್ಫೋಟದ ರೂವಾರಿ, ಭೂಗತ ಪಾತಕಿ ದಾವೂದ್ ಇಬ್ರಾಹಿಂ (Dawood Ibrahim) ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ (Karachi Hospital) ದಾಖಲಾಗಿರುವುದಾಗಿ ಮೂಲಗಳು ತಿಳಿಸಿವೆ.

ಸದ್ಯ ಪ್ರಾಥಮಿಕ ಮೂಲಗಳ ಮಾಹಿತಿಯಿಂದ ವಿಷ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ಇನ್ನೂ ಸ್ಪಷ್ಟವಾಗಿಲ್ಲ. ಕಳೆದ ಎರಡು ದಿನಗಳಿಂದಲೂ ಇಬ್ರಾಹಿಂ ಆಸ್ಪತ್ರೆಯಲ್ಲಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ವಿವಾದ – ಇಂದು ಜಿಲ್ಲಾ ಕೋರ್ಟ್‌ಗೆ ವರದಿ ಸಲ್ಲಿಕೆ

ದಾವೂದ್‌ ಇಬ್ರಾಹಿಂ ದಾಖಲಾಗಿರುವ ಆಸ್ಪತ್ರೆ ಸುತ್ತಲೂ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಆಸ್ಪತ್ರೆಯ ಉನ್ನತ ಅಧಿಕಾರಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಮಾತ್ರವೇ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಇಬ್ರಾಹಿಂ ಸಂಬಂಧಿಕರಾದ ಅಲಿಶಾ ಪಾರ್ಕರ್ ಮತ್ತು ಸಾಜಿದ್ ವಾಗ್ಲೆ ಜೊತೆಗೆ ನಿರಂತರ ಸಂಪರ್ಕದಲ್ಲಿರುವ ಮುಂಬೈ ಪೊಲೀಸರು (Mumbai Police) ಪಾತಕಿ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲಯು ಪ್ರಯತ್ನಿಸುತ್ತಿದ್ದಾರೆ.

ಈ ವರ್ಷದ ಜನವರಿ ತಿಂಗಳಲ್ಲಿ ದಾವೂದ್‌ ಸಹೋದರಿ ಹಸೀನಾ ಪಾರ್ಕರ್‌ನ ಮಗ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಹೇಳಿಕೆ ನೀಡಿದ್ದು, ಇಬ್ರಾಹಿಂ 2ನೇ ಮದುವೆಯಾಗಿ ಕರಾಚಿಯಲ್ಲೇ ನೆಲೆಸಿರುವುದಾಗಿ ತಿಳಿಸಿದ್ದ.

ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಪಾಕ್ ಭದ್ರತಾ ಪಡೆಗಳ ನೆರಳಿನಲ್ಲಿ ಆಶ್ರಯ ಪಡೆದಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಮನೆ ಬಳಿ ಮೂತ್ರ ವಿಸರ್ಜಿಸಿದಳೆಂದು ಮಹಿಳೆಯ ಗುಪ್ತಾಂಗಕ್ಕೆ ರಾಡ್‍ನಿಂದ ಹಲ್ಲೆ!