ದೇವೇಗೌಡ್ರ ಗೆಲುವಿಗಾಗಿ ಡಿಸಿಎಂ ಭರ್ಜರಿ ಪ್ರಚಾರ

ತುಮಕೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರ ಗೆಲುವಿಗಾಗಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರ ಮೈತ್ರಿ ಅಭ್ಯರ್ಥಿಯಾಗಿರುವ ದೇವೇಗೌಡ ಅವರ ಪರವಾಗಿ ಪರಮೇಶ್ವರ್ ಅವರು ತಮ್ಮ ಸ್ವಕ್ಷೇತ್ರ ಕೊರಟಗೆರೆಯಲ್ಲಿ ಇಂದು ಪ್ರಚಾರ ನಡೆಸಲಿದ್ದಾರೆ.

ಪರಮೇಶ್ವರ್ ಬೆಳಗ್ಗೆ 11 ಗಂಟೆಗೆ ತಾಲೂಕಿನ ಪುರವಾರ ಗ್ರಾಮದಲ್ಲಿ ಮೈತ್ರಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಕಸಬಾ ಹೋಬಳಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.

ಬಳಿಕ ಸಂಜೆ 4 ಗಂಟೆಗೆ ಹೊಳವನಹಳ್ಳಿ ಹೋಬಳಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಪರಂ ತಳಮಟ್ಟದಲ್ಲಿ ಕಾರ್ಯಕರ್ತರ ಮೈತ್ರಿಗೆ ಹರಸಹಾಸ ಪಡುತ್ತಿದ್ದಾರೆ. ಡಿಸಿಎಂ ಪರಮೇಶ್ವರ್ ಜೊತೆಯಲ್ಲಿ ಸಚಿವ ಎಸ್‍ಆರ್ ಶ್ರೀನಿವಾಸ್ ಸಾಥ್ ನೀಡಲಿದ್ದಾರೆ.

Comments

Leave a Reply

Your email address will not be published. Required fields are marked *