ಮುಂಬೈ: ಭಾಂಡೂಪ್‌ನಲ್ಲಿರುವ ಬೃಹನ್‌ಮುಂಬೈ ಮುನ್ಸಿಪಲ್ (ಬಿಎಂಸಿ) ನಡೆಸುತ್ತಿರುವ ಸಾವಿತ್ರಿಬಾಯಿ ಫುಲೆ ಹೆರಿಗೆ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ನಾಲ್ಕು ನವಜಾತ ಶಿಶುಗಳು ಮೃತಪಟ್ಟಿರುವುದು ಆತಂಕ ಮೂಡಿಸಿದೆ.
ಕಳೆದ 4 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿರಿಸಿದ ನವಜಾತಾ ಶಿಶುಗಳು ಸಾವನ್ನಪ್ಪುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ ಎಂದು ಬಿಎಂಸಿ ಗುರುವಾರ ತಿಳಿಸಿದೆ.
ಗುರುವಾರ ರಾಜ್ಯ ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ಈ ವಿಷಯವನ್ನು ಪ್ರಸ್ತಾಪಿಸಿದವು. ನಂತರ ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ ಆಸ್ಪತ್ರೆಯ ವೈದ್ಯಾಧಿಕಾರಿಯನ್ನು ಅಮಾನತು ಗೊಳಿಸಲಾಗುವುದು. ಈ ಕುರಿತು ಉನ್ನತ ಮಟ್ಟದ ತನಿಖೆಯನ್ನು ನಡೆಸುವುದಾಗಿ ತಿಳಿಸಿದರು. ಇದನ್ನೂ ಓದಿ: ಕೋವಿಡ್ ಎರಡನೇ ಲಸಿಕಾ ಅಭಿಯಾನದಲ್ಲಿ ಬೆಂಗಳೂರು ನಗರ ಜಿಲ್ಲೆ ರಾಜ್ಯಕ್ಕೆ ಪ್ರಥಮ

ಇದಕ್ಕೂ ಮುನ್ನ ಪ್ರತಿಪಕ್ಷಗಳು ಬಿಎಂಸಿಯನ್ನು ಟೀಕಿಸಿದ್ದವು. ಆಡಳಿತದ ನಿರ್ಲಕ್ಷ್ಯದಿಂದ ಶಿಶುಗಳು ಸಾವನ್ನಪ್ಪುತ್ತಿವೆ ಎಂದು ಹೇಳಲಾಗಿತ್ತು. ಆದರೆ ಸೋಂಕಿನಿಂದಾಗಿ ಶಿಶುಗಳ ಸಾವು ಸಂಭವಿಸಿದೆ ಎಂದು ವೈದ್ಯರು ಪೋಷಕರಿಗೆ ತಿಳಿಸಿರುವ ಬಗ್ಗೆ ವರದಿಯಾಗಿದೆ.
ನಾಲ್ಕು ಶಿಶುಗಳ ಪೈಕಿ ಮೂರು ಶಿಶುಗಳು ಸೆಪ್ಟಿಕ್ ಶಾಕ್‌ನಿಂದಾಗಿ ಮೃತಪಟ್ಟಿವೆ. ಶಿಶುಗಳಿಗೆ ಸೋಂಕು ತಗುಲಿದ್ದು, ಔಷಧಿಗೆ ಗುಣಮುಖವಾಗಿಲ್ಲ ಎಂದು ಶಿಶುಗಳ ಸಾವಿನ ಬಗ್ಗೆ ವೈದ್ಯಾಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಫುಡ್ ಡೆಲಿವರಿ ಬಾಯ್ ಮೇಲೆ ಮಹಿಳಾ ಸಿಬ್ಬಂದಿ ದರ್ಪ

Leave a Reply