ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್‌ಗೆ ಕೊಲೆ ಬೆದರಿಕೆ – 50 ಲಕ್ಷಕ್ಕೆ ಬೇಡಿಕೆ

ಮುಂಬೈ: ಸಲ್ಮಾನ್ ಖಾನ್ (Salman Khan) ಬಳಿಕ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್‌ಗೆ (Shah Rukh Khan) ವ್ಯಕ್ತಿಯೊಬ್ಬ ಕೊಲೆ ಬೆದರಿಕೆ ಹಾಕಿದ್ದಾನೆ.

ಬಾಲಿವುಡ್ ನಟ ಸಲ್ಮಾನ್ ಖಾನ್ ಬಳಿಕ ಇದೀಗ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್‌ಗೆ ಅಪರಿಚಿತ ವ್ಯಕ್ತಿಯಿಂದ ಕೊಲೆ ಬೆದರಿಕೆ ಕರೆಯೊಂದು ಬಂದಿದೆ. ಮುಂಬೈನ ಬಾಂದ್ರಾ ಪೊಲೀಸರಿಗೆ (Bandra Police) ಕರೆ ಮಾಡಿರುವ ವ್ಯಕ್ತಿ ಐವತ್ತು ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾನೆ. ಇದರ ಬೆನ್ನಲ್ಲೇ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಚುಮು ಚುಮು ಚಳಿಯಲ್ಲಿ ಓಡಾಡಿದ ಬೆಟ್ಟದ ಹುಲಿ

ಛತ್ತೀಸ್‌ಗಢದ (Chattisgarh) ರಾಯಪುರದ ಫೈಜಾನ್ ಖಾನ್ ಎಂಬುವರ ಹೆಸರಿನಲ್ಲಿ ನೋಂದಾಯಿಸಲಾದ ಮೊಬೈಲ್ ಸಂಖ್ಯೆಯಿಂದ ಬೆದರಿಕೆ ಕರೆ ಸ್ವೀಕರಿಸಲಾಗಿದೆ. ಈ ಸಂಬಂಧ ಫೈಜಾನ್ ಖಾನ್‌ನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆಯಲ್ಲಿ ತಾನು ವಕೀಲನಾಗಿದ್ದು, ನ.2 ರಂದು ಮೊಬೈಲ್ ಕಳ್ಳತನವಾಗಿದೆ. ಈ ಬಗ್ಗೆ ದೂರು ದಾಖಲಾಗಿದೆ. ಶಾರುಖ್ ಖಾನ್‌ಗೆ ಬೆದರಿಕೆ ಹಾಕಲು ಯಾರೋ ಅದನ್ನು ದುರ್ಬಳಕೆ ಮಾಡಿಕೊಂಡಿರಬಹುದು ಎಂದು ಹೇಳಿದ್ದಾನೆ ಎನ್ನಲಾಗಿದೆ.

ಕರೆ ಮಾಡಿದ ವ್ಯಕ್ತಿಗೆ ಆತನ ಗುರುತು ಮತ್ತು ಸ್ಥಳದ ಬಗ್ಗೆ ಪೊಲೀಸರು ಪ್ರಶ್ನಿಸಿದ್ದಾರೆ. ಆದ ಆತ ನನ್ನನ್ನು “ಹಿಂದೂಸ್ತಾನಿ” ಎಂದು ಕರೆಯಲು ಪೊಲೀಸರಿಗೆ ತಿಳಿಸಿದ್ದಾನೆ. ನ.5 ರಂದು ಮಧ್ಯಾಹ್ನ 1:20ರ ಸುಮಾರಿಗೆ ಕರೆ ಮಾಡಿ ಈ ಬೆದರಿಕೆ ಹಾಕಲಾಗಿದೆ ಎಂದು ಮೂಲಗಳು ಹೇಳಿವೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಶಾರುಖ್ ಖಾನ್ ಅವರಿಗೆ ಜೀವ ಬೆದರಿಕೆ ಬಂದಿತ್ತು. ಅದಾದ ಬಳಿಕ ಅವರ ಭದ್ರತೆಯನ್ನು ಙ+ ಮಟ್ಟಕ್ಕೆ ಹೆಚ್ಚಿಸಲಾಯಿತು. ದಿನದ 24 ಗಂಟೆ ಆರು ಶಸ್ತ್ರಸಜ್ಜಿತ ಸಿಬ್ಬಂದಿಗಳ ಜೊತೆಯಲ್ಲಿ ಇರುವುದನ್ನು ಖಚಿತಪಡಿಸುತ್ತದೆ. ಇದಕ್ಕೂ ಮೊದಲು ಶಾರುಖ್ ಖಾನ್ ಇಬ್ಬರು ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿಗಳನ್ನು ಹೊಂದಿದ್ದರು.

ಸಲ್ಮಾನ್ ಖಾನ್‌ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ ಬಂದ ಬೆನ್ನಲ್ಲೇ ಹಲವಾರು ವ್ಯಕ್ತಿಗಳು ಮುಂಬೈ ಟ್ರಾಫಿಕ್ ಪೊಲೀಸರಿಗೆ ಸಂದೇಶ ಕಳುಹಿಸಿ ಸಲ್ಮಾನ್ ಖಾನ್ ಹತ್ಯೆ ಮಾಡುವ ಬೆದರಿಕೆ ಹಾಕಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈ ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಇಂತಹದೇ ಪ್ರಕರಣದಲ್ಲಿ ಇತ್ತೀಚಿಗೆ ತುಮಕೂರು ಮೂಲದ ವಿಕ್ರಮ್ ಎನ್ನುವವರನ್ನು ಪೊಲೀಸರು ಬಂಧಿಸಿದ್ದರು.ಇದನ್ನೂ ಓದಿ: Kodagu | ಬಸ್‌ ಸೌಲಭ್ಯದ ಕೊರತೆ – ವಿದ್ಯಾರ್ಥಿಗಳಿಗೆ ಸಂಕಷ್ಟ