10 ದಿನಗಳಲ್ಲಿ ರಾಜೀನಾಮೆ ಕೊಡದಿದ್ರೆ ಸಿದ್ದಿಕಿಯಂತೆ ಹತ್ಯೆ – ಸಿಎಂ ಯೋಗಿಗೆ ಬೆದರಿಕೆ ಹಾಕಿದ್ದ ಮಹಿಳೆ ಅರೆಸ್ಟ್

ಮುಂಬೈ: 10 ದಿನದೊಳಗಾಗಿ ಸಿಎಂ ಸ್ಥಾನದಿಂದ ಕೆಳಗಿಳಿಯದಿದ್ದರೆ ಉತ್ತರ ಪ್ರದೇಶದ (Uttar Pradesh) ಸಿಎಂ ಯೋಗಿ ಆದಿತ್ಯನಾಥ್‌ರನ್ನ (Yogi Adityanath) ಬಾಬಾ ಸಿದ್ದಿಕಿಯಂತೆ ಹತ್ಯೆ ಮಾಡುವುದಾಗಿ ಬೆದರಿಕೆಯ ಸಂದೇಶ ಕಳುಹಿಸಿದ್ದ ಮಹಿಳೆಯನ್ನು ಮುಂಬೈ ಪೊಲೀಸರು (Mumbai Police) ಬಂಧಿಸಿದ್ದಾರೆ.

ಮುಂಬೈ ಟ್ರಾಫಿಕ್ ಪೊಲೀಸ್ ನಿಯಂತ್ರಣ ಕೊಠಡಿಯ ವಾಟ್ಸಪ್ ಸಹಾಯವಾಣಿ ಸಂಖ್ಯೆಗೆ ಶನಿವಾರ ಸಂಜೆ ಅಪರಿಚಿತ ನಂಬರ್‌ನಿಂದ ಜೀವ ಬೆದರಿಕೆ ಸಂದೇಶ ಬಂದಿದೆ. ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡದಿದ್ದರೆ ಬಾಬಾ ಸಿದ್ದಿಕಿಯಂತೆ ಹತ್ಯೆ ಮಾಡಲಾಗುವುದು ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು. ಇದನ್ನೂ ಓದಿ: ಪ್ರವಾಸಿಗರಿಗೆ ಶಾಕ್‌ – ಲಾಲ್‌ಬಾಗ್‌ ಪ್ರವೇಶ ದರ ಭಾರೀ ಏರಿಕೆ

ಈ ಬಗ್ಗೆ ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದರು. ಯುಪಿ ಸಿಎಂ ಕೊಲೆ ಬೆದರಿಕೆ ಹಿಂದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆಯ ಸರಮಾಲೆಯ ನಡುವೆಯೇ ಉತ್ತರ ಪ್ರದೇಶ ಮುಖ್ಯಮಂತ್ರಿಗೂ ಬೆದರಿಕೆ ಬಂದಿದೆ. ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ ಅವರನ್ನು ಮುಂಬೈನ ಬಾಂದ್ರಾದಲ್ಲಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು. ಇದನ್ನೂ ಓದಿ: Mandya | ರೈತರ ಜಮೀನು, ಹಿಂದೂ ದೇಗುಲ ಮಾತ್ರವಲ್ಲ ಸರ್ಕಾರಿ ಶಾಲೆಯೂ ವಕ್ಫ್ ಆಸ್ತಿ!