ವಕ್ಫ್ ಆಸ್ತಿಯನ್ನು ರಾಷ್ಟ್ರೀಯ ಸಂಪತ್ತನ್ನಾಗಿ ಘೋಷಿಸಿ – ಪ್ರಧಾನಿ ಮೋದಿಗೆ ಯತ್ನಾಳ್ ಪತ್ರ

– ದೇಶದಲ್ಲಿ ಮತ್ತೊಂದು ಪಾಕಿಸ್ತಾನ ಆಗಲು ಬಿಡಬಾರದು ಎಂದ ಶಾಸಕ

ವಿಜಯಪುರ: ವಕ್ಫ್ ಬೋರ್ಡ್‌ನಿಂದ (Waqf Board ಭಾರತೀಯರಿಗೆ ಅನ್ಯಾಯವಾಗುತ್ತಿದ್ದು, ವಕ್ಫ್ ಆಸ್ತಿಯನ್ನ ರಾಷ್ಟ್ರೀಯ ಸಂಪತ್ತನ್ನಾಗಿ ಘೋಷಿಸುವಂತೆ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ (Basangouda Patil Yatnal)  ಪ್ರಧಾನಿ ಮೋದಿಗೆ (Narendra Modi) ಪತ್ರ ಬರೆದಿದ್ದಾರೆ.

ವಕ್ಫ್ ಬೋರ್ಡ್‌ನಿಂದಾಗಿ ಜಮೀನು ಮಾಲಿಕರು, ರೈತರಿಗೆ ತೊಂದರೆಯಾಗುತ್ತಿದೆ. ರೈತರು, ಜಮೀನು ಮಾಲಿಕರು ಸೇರಿ ಧಾರ್ಮಿಕ ಸಂಸ್ಥೆ, ಮಠ ಮಾನ್ಯಗಳ ಜಮೀನನ್ನು ವಕ್ಫ್ ಆಕ್ರಮಿಸಿಕೊಳ್ಳುತ್ತದೆ. ವಕ್ಫ್ ಕಾನೂನು ಅಸಮಾನತೆ, ಕ್ರೂರತೆಯನ್ನು ಒಳಗೊಂಡಿದೆ. ವಕ್ಫ್ ಬೋರ್ಡ್‌ಗೆ ಅನಿಯಂತ್ರಿತ, ಪರಿಮಿತ ಅಧಿಕಾರ ನೀಡಲಾಗಿದೆ ಎಂದು ಪತ್ರದಲ್ಲಿ ಶಾಸಕರು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ರಾಜ್ಯದ ಜನತೆಗೆ ಕನ್ನಡದಲ್ಲೇ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಮತ್ತೊಂದು ಪಾಕಿಸ್ತಾನ ಆಗುವುದಕ್ಕೆ ನಾವು ಬಿಡಬಾರದು. ಅದಕ್ಕಾಗಿ ನಾನು ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದರು.

ಧಾರವಾಡದ ಉಪ್ಪಿನಬೆಟಗೇರಿ ಗ್ರಾಮದ ಸಾಮಾಜಿಕ ಕಾರ್ಯಕರ್ತ ಕೃಷ್ಣಪ್ಪ ಬುದ್ನಿ ಎಂಬುವವರು ಕಳೆದ ವರ್ಷ ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಬರುವುದನ್ನು ತಡೆಯುವಂತೆ ಆಗ್ರಹಿಸಿ ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದರು. ಇದನ್ನೂ ಓದಿ: ಬೆಳಗಾವಿಗೂ ಕಾಲಿಟ್ಟ ವಕ್ಫ್ ಆಸ್ತಿ ವಿವಾದ – 30 ರೈತರ ಪಹಣಿಯಲ್ಲಿ ವಕ್ಫ್ ಹೆಸರು ನಮೂದು!

ಉಪ್ಪಿನಬೆಟಗೇರಿ ಗ್ರಾಮದ ಅನೇಕ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಹೆಸರು ಉಲ್ಲೇಖಿಸಲಾಗಿತ್ತು. ಇದಕ್ಕಾಗಿ ರೈತರು ಕಚೇರಿಯಿಂದ ಕಚೇರಿಗೆ ಅಲೆದಾಡಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದಾಗಿ ಕೃಷ್ಣಪ್ಪ ಪ್ರಧಾನಿ ಮೋದಿ ಗಮನಕ್ಕೆ ತರಬೇಕೆಂಬ ನಿಟ್ಟಿನಲ್ಲಿ ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದರು. ಇದನ್ನೂ ಓದಿ: ಹಾಸನಾಂಬೆ ದೇವಿ ದರ್ಶನ ಮುಗಿಸಿ ಹಿಂತಿರುಗುವ ವೇಳೆ ಕಾರು ಡಿಕ್ಕಿ- ತಂದೆ, ಮಗಳು ಸಾವು
ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಬರುವುದನ್ನು ತಡೆಯುವಂತೆ ಆಗ್ರಹಿಸಿ ಹಾಗೂ ಯಾವ ಮಾನದಂಡದ ಮೇಲೆ ಹೀಗೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿ ಕೃಷ್ಣಪ್ಪ ಪತ್ರ ಬರೆದಿದ್ದರು. 2023ರ ನ.28ರಂದು ಪ್ರಧಾನಿಗೆ ಪತ್ರ ಕಳುಹಿಸಿದ್ದರು. ಡಿ.2ರಂದು ಪತ್ರ ಪ್ರಧಾನಿ ಕಚೇರಿ ತಲುಪಿದ್ದು, ಡಿ.8ರಂದು ಕೃಷ್ಣಪ್ಪಗೆ ಪಿಎಂ ಕಚೇರಿಯಿಂದ ಕರೆ ಬಂದಿತ್ತು. ಪತ್ರ ಬರೆದು, ದೂರು ಕೊಡುತ್ತಿರುವುದು ನೀವೆನಾ? ಎಂದು ಸಿಬ್ಬಂದಿ ಪ್ರಶ್ನಿಸಿ, ಖಚಿತಪಡಿಸಿಕೊಂಡಿದ್ದರು. ಜೊತೆಗೆ ನಿಮ್ಮ ದೂರು ಪ್ರಧಾನಿಗಳ ಗಮನಕ್ಕೆ ತರುವುದಾಗಿ ಸಿಬ್ಬಂದಿ ತಿಳಿಸಿದ್ದರು.  ಇದನ್ನೂ ಓದಿ: Canada | ಗಾಯಕ ಎಪಿ ಧಿಲ್ಲೋನ್ ಮನೆ ಎದುರು ಗುಂಡು ಹಾರಿಸಿದ್ದ ವಿಡಿಯೋ ವೈರಲ್