ಕಾಂಗ್ರೆಸ್ ಜೊತೆ ಬಿಜೆಪಿ ಹೊಂದಾಣಿಕೆಯಿಂದ ಲೋಕಸಭಾ ಚುನಾವಣೆಯಲ್ಲಿ ಸೋಲಾಗಿದೆ: ಬಿ.ಪಿ ಹರೀಶ್

ದಾವಣಗೆರೆ: ಕಾಂಗ್ರೆಸ್ (Congress) ಹಾಗೂ ಬಿಜೆಪಿ (BJP) ಹೊಂದಾಣಿಕೆ ರಾಜಕಾರಣ ಮಾಡಿದ್ದಾರೆ ಎನ್ನುವುದು ಸತ್ಯ ಎಂದು ಬಿಜೆಪಿ ಶಾಸಕ ಬಿ.ಪಿ ಹರೀಶ್ (B.P Hareesh) ಹೇಳಿದ್ದಾರೆ.

ದಾವಣಗೆರೆಯಲ್ಲಿ (Davanagere) ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಕಾಂಗ್ರೆಸ್ ಸಚಿವರು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಇದರಿಂದ ಬಿಜೆಪಿ ಲೋಕಸಭಾ ಕ್ಷೇತ್ರವನ್ನು ಕಳೆದುಕೊಳ್ಳುವಂತೆ ಆಯ್ತು. ಈ ಮಾತನ್ನು ಶಾಸಕ ಶಿವಗಂಗಾ ಬಸವರಾಜ್ ಹೇಳಿರುವುದಕ್ಕಿಂತ ಮುಂಚಿನಿಂದಲೂ ನಾನು ಹೇಳುತ್ತಾ ಬಂದಿದ್ದೇನೆ ಎಂದಿದ್ದಾರೆ.

ಪಾಪಾ ಮಾಡಿದವರ ಹೆಸರನ್ನು ಶಿವಗಂಗಾ ಬಸವರಾಜ್ ಬಹಿರಂಗ ಪಡಿಸಲಿ. ಈ ಒಳ ಒಪ್ಪಂದದಿಂದ ಬಿಜೆಪಿ ಪಕ್ಷವನ್ನು ಸೋಲಿಸಿದವರಿಗೆ ಮುಂದಿನ ದಿನಗಳಲ್ಲಿ ಜನರು ಪಾಠ ಕಲಿಸುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಬಗ್ಗೆ ಕಾಂಗ್ರೆಸ್ ಶಾಸಕರಿಗೆ ಸಾಕಾಗಿದೆ. ಅವರಿಗೆ ಜಿಲ್ಲೆಯ ಅಭಿವೃದ್ಧಿ ಮಾಡಲು ಮನಸ್ಸಿಲ್ಲ. ಅವರಿಗೆ ಇರುವುದು ಒಂದೇ ಗುರಿ, ಇಂಡಸ್ಟ್ರಿಯನ್ನು ಬೆಳೆಸಿ ಟಾಟಾ ಬಿರ್ಲಾ ತರ ಆಗಬೇಕು ಎನ್ನುವುದು. ಕಾಂಗ್ರೆಸ್ ಶಾಸಕರಿಗೆ ಅನುಧಾನ ಕೊಡುತ್ತಿಲ್ಲ ಇನ್ನೂ ನಮಗೆ ಎಲ್ಲಿ ಕೊಡ್ತಾರೆ ಎಂದು ಉಸ್ತುವಾರಿ ಸಚಿವರ ವಿರುದ್ಧವೂ ಕಿಡಿಕಾರಿದ್ದಾರೆ.