‘ದಿ ಕಾಶ್ಮೀರ್ ಫೈಲ್ಸ್’ ನಂತರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕೈಯಲ್ಲಿ ‘ಡೆಲ್ಲಿ ಫೈಲ್ಸ್’

ಗಾಗಲೇ ತಾಷ್ಕೆಂಟ್ ಫೈಲ್ಸ್ ಮತ್ತು ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗಳ ಮೂಲಕ ಜಗತ್ತಿಗೆ ಸತ್ಯದ ಮತ್ತೊಂದು ಮುಖವನ್ನು ಅನಾವರಣ ಮಾಡಿರುವ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಇದೀಗ ಮತ್ತೊಂದು ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಘೋಷಣೆ ಮಾಡಿದಂತೆ ಅವರು ‘ಡೆಲ್ಲಿ ಫೈಲ್ಸ್ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಇದನ್ನೂ ಓದಿ : ಟರ್ಕಿಯಲ್ಲಿ ರಜಾಮಜಾ ಮಾಡುತ್ತಿರೋ ಬ್ಯೂಟಿಫುಲ್‌ ಗರ್ಲ್ ಕಾರುಣ್ಯ ರಾಮ್

‘ತಾಷ್ಕೆಂಟ್ ಫೈಲ್ಸ್’ ಮೂಲಕ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರ ಸಾವಿನ ರಹಸ್ಯವನ್ನು ಬೇಧಿಸಿದ್ದ ವಿವೇಕ್ ಅಗ್ನಿಹೋತ್ರಿ ‘ದಿ ಕಾಶ್ಮೀರ್ ಫೈಲ್ಸ್’ ನಲ್ಲಿ ಕಾಶ್ಮೀರ ಪಂಡಿತರ ನರಮೇಧದ ಹಿಂದಿನ ಸತ್ಯವನ್ನು ಬಯಲಿಗೆಳೆದಿದ್ದರು. ಇದೀಗ ‘ಡೆಲ್ಲಿ ಫೈಲ್ಸ್’ ಮೂಲಕ ಬದುಕುವ ಹಕ್ಕಿನ ಕುರಿತಾಗಿ ಸಿನಿಮಾ ಮಾಡುತ್ತಿದ್ದಾರೆ. ಆದರೆ, ಇದು ಯಾವ ಘಟನೆಯನ್ನು ಆಧರಿಸಿದ ಸಿನಿಮಾ ಎಂದು ಈವರೆಗೂ ಅವರು ಹೇಳಿಕೊಂಡಿಲ್ಲ. ಇದನ್ನೂ ಓದಿ : ತಾಳಿಕಟ್ಟಿ ಹೆಂಡತಿಯನ್ನು ಎತ್ತಿಕೊಂಡ ರಣಬೀರ್ ಕಪೂರ್

ತಮ್ಮ ಡೆಲ್ಲಿ ಫೈಲ್ಸ್ ಸಿನಿಮಾಗೆ ‘ರೈಟ್ ಟು ಲೈಫ್‍’ ಎಂದು ಟ್ಯಾಗ್ ಲೈನ್ ನೀಡಿದ್ದು, ಜೀವಿಸುವ ಹಕ್ಕಿನ ಕಥೆಯನ್ನು ಇದು ಹೇಳಲಿದೆ ಎಂದು ಊಹಿಸಿಕೊಳ್ಳಬಹುದು. ಈಗಾಗಲೇ ಸ್ಕ್ರಿಪ್ಟ್ ಕೆಲಸ ಮುಗಿದಿದ್ದು, ಅತೀ ಶೀಘ್ರದಲ್ಲೇ ಸಿನಿಮಾದ ಶೂಟಿಂಗ್ ಕೂಡ ಶುರು ಮಾಡಲಿದ್ದಾರೆ. ಇದು ಹಿಂದಿ ಮತ್ತು ಪಂಜಾಬಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗಲಿದೆ. ಇದನ್ನೂ ಓದಿ: ‘BOSS’ ಪಟ್ಟ ಅಲಂಕರಿಸಿದ ಯಶ್ : ಟ್ವಿಟರ್ ಟ್ರೆಂಡಿಂಗ್ ನಲ್ಲಿ #YASHBOSS

ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಭಾರತೀಯ ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿತ್ತು. ಭಾರತ ಸರಕಾರವೇ ಈ ಸಿನಿಮಾದ ಪರ ನಿಂತುಕೊಂಡಿತು. ಅನೇಕ ರಾಜ್ಯಗಳು ಮನರಂಜನಾ ತೆರೆಗೆ ಮನ್ನಾ ಮಾಡಿದವು. ಅಲ್ಲದೇ, ಅನೇಕ ಕಡೆ ಸ್ವಯಂ ಪ್ರೇರಿತರಾಗಿ ಹಲವರು ಸಿನಿಮಾ ತೋರಿಸಿದರು. ಹೀಗಾಗಿ ಡೆಲ್ಲಿ ಫೈಲ್ಸ್ ಮೇಲೆಯೂ ಈಗಿನಿಂದಲೇ ನಿರೀಕ್ಷೆ ಹೆಚ್ಚಾಗಿದೆ.

Comments

Leave a Reply

Your email address will not be published. Required fields are marked *