ಪಟಾಕಿ ಇಲ್ಲದೇ ದೀಪಾವಳಿ ಆಚರಿಸಲು ಶಾಲೆಗಳಲ್ಲೇ ಮಕ್ಕಳಿಗೆ ಪ್ರೇರಣೆ- ದೆಹಲಿ ಸರ್ಕಾರದಿಂದ ಹೊಸ ಪ್ರಯತ್ನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಂಟಾಗಿರುವ ವಾಯು ಮಾಲಿನ್ಯದಿಂದ ಕಂಗೆಟ್ಟಿರುವ ಅರವಿಂದ್ ಕೇಜ್ರಿವಾಲ್‌ ನೇತೃತ್ವದ ಸರ್ಕಾರ, ಮಾಲಿನ್ಯದ ಪ್ರಮಾಣ ಕಡಿಮೆ ಮಾಡಲು ಹೊಸ ಹೊಸ ಚಿಂತನೆಗಳನ್ನು ಮಾಡುತ್ತಿದೆ. ಇದೇ ನಿಟ್ಟಿನಲ್ಲಿ ಈ ಬಾರಿ ಪಟಾಕಿ ರಹಿತ ದೀಪಾವಳಿ ಆಚರಿಸಲು ಮಕ್ಕಳನ್ನು ಪ್ರೇರೇಪಿಸಲು ಶಾಲೆ ಮತ್ತು ಕಾಲೇಜುಗಳಿಗೆ ದೆಹಲಿ ಸರ್ಕಾರ ಸೂಚನೆ ನೀಡಿದೆ‌.

FIRECRACKERS

ನವದೆಹಲಿಯಲ್ಲಿ ನವೆಂಬರ್ 1ರಿಂದ ದೆಹಲಿಯಲ್ಲಿ ಶಾಲೆಗಳು ಶುರುವಾಗಿವೆ. ಶಾಲೆಗಳಲ್ಲಿ ದೀಪಾವಳಿ ಸೇರಿದಂತೆ ಮುಂಬರುವ ಎಲ್ಲ ಹಬ್ಬಗಳನ್ನೂ ಪಟಾಕಿ ರಹಿತವಾಗಿ ಆಚರಿಸಲು ಮಕ್ಕಳನ್ನು ಪ್ರೇರೇಪಿಸುವಂತೆ ಶಿಕ್ಷಕರನ್ನು ದೆಹಲಿ ಸರ್ಕಾರ ಕೇಳಿಕೊಂಡಿದೆ. ಇದನ್ನೂ ಓದಿ: ದೀಪಾವಳಿ ವಿಶೇಷ ರಾಯನ್ ಕ್ಯೂಟ್ ಫೋಟೋಸ್ ಶೇರ್ ಮಾಡಿದ ಮೇಘನಾ ರಾಜ್

ತರಗತಿಗಳ ವೇಳೆ ಮತ್ತು ಶಾಲೆಗಳ ವ್ಯಾಟ್ಸಪ್ ಗ್ರೂಪ್‌ಗಳಲ್ಲಿ ಪಟಾಕಿಗಳಿಂದ ಉಂಟಾಗಬಹುದಾದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಪಟಾಕಿ ಹೊಡೆಯದಂತೆ ಜಾಗೃತಿ ಮೂಡಿಸಲು ಹೇಳಿದೆ. ಮುಂಬರುವ ಎಲ್ಲ ಹಬ್ಬಗಳನ್ನು ದೀಪ, ಮೇಣ ಬೆಳಗುವ ಮೂಲಕ ಆಚರಿಸಲು ತಿಳಿಸುವಂತೆ ಶಾಲೆ ಮುಖ್ಯಸ್ಥರಿಗೆ ಸರ್ಕಾರ ಸೂಚಿಸಿದೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಿಂದ ಬೊಕ್ಕಸಕ್ಕೆ 2,100 ಕೋಟಿ ಆದಾಯ ನಷ್ಟ: ಸಿಎಂ

DEEPAVALI

ದೆಹಲಿಯಲ್ಲಿ ದೀಪಾವಳಿ ಬಳಿಕ ಭಾರಿ ಪ್ರಮಾಣದಲ್ಲಿ ವಾಯು ಮಾಲಿನ್ಯ ಉಂಟಾಗುತ್ತದೆ. ಇದಕ್ಕೆ ಕಾರಣ ದೀಪಾವಳಿ ವೇಳೆ ಸಿಡಿಸುವ ಪಟಾಕಿ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿರುವ ವಾಹನ ದಟ್ಟಣೆ ಮತ್ತು ಕೃಷಿ ಭೂಮಿಗಳಿಗೆ ಹಚ್ಚುವ ಬೆಂಕಿಯಿಂದ ಎಂದು ಹೇಳಲಾಗುತ್ತಿದೆ. ವಿಶೇಷವಾಗಿ ಪಟಾಕಿಯಿಂದ ಸಲ್ಫರ್ ಡೈಆಕ್ಸೈಡ್, ಕಾರ್ಬನ್ ಮಾನಾಕ್ಸೈಡ್ ಗಾಳಿಯಲ್ಲಿ ಬೆರೆಯಲಿದ್ದು, ಇದರಿಂದ ಮಾರಕ ರೋಗಗಳು ಕೂಡಾ ಬರಲಿದೆ ಎಂದು ದೆಹಲಿ ಸರ್ಕಾರ ಎಚ್ಚರಿಸಿದೆ.

Comments

Leave a Reply

Your email address will not be published. Required fields are marked *