ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ (Delhi) ಹಲವು ಶಾಲೆಗಳಿಗೆ ಶನಿವಾರ ಮುಂಜಾನೆ ಬಾಂಬ್ ಬೆದರಿಕೆ (Bomb Threat) ಕರೆಗಳು ಬಂದಿದ್ದು, ಪೊಲೀಸ್ ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳ (Bomb Disposal Squads) ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ನಡೆಸುತ್ತಿವೆ.
ದ್ವಾರಕಾದ ದೆಹಲಿ ಪಬ್ಲಿಕ್ ಸ್ಕೂಲ್, ಕೃಷ್ಣ ಮಾಡೆಲ್ ಪಬ್ಲಿಕ್ ಸ್ಕೂಲ್, ಸರ್ವೋದಯ ವಿದ್ಯಾಲಯ ಸೇರಿದಂತೆ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ ಹಾಗೂ ಬಾಂಬ್ ನಿಷ್ಕ್ರಿಯ ದಳ ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಸ್ಥಳಾಂತರಿಸಿತು. ಇದನ್ನೂ ಓದಿ: ಜಾತಿ ಕಾಲಂನಲ್ಲಿ ಕುರುಬ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್ ಬಗ್ಗೆ ಸಿಎಂ ಬಳಿ ಕೇಳಿದ್ದೇವೆ – ಎಂ.ಬಿ ಪಾಟೀಲ್
ಬಾಂಬ್ ಬೆದರಿಕೆ ಬಂದಿದ್ದ ಶಾಲೆಗಳ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ನಾವು ಶಾಲೆಗಳ ಆವರಣವನ್ನು ಸಂಪೂರ್ಣವಾಗಿ ಪರಿಶೀಲಿಸಿದ್ದು, ಯಾವುದೇ ಅನುಮಾನಾಸ್ಪದ ರೀತಿಯ ವಸ್ತುಗಳು ಕಂಡುಬಂದಿಲ್ಲ. ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ, ಕೊಲೆ ಬೆದರಿಕೆ ಸೇರಿ ಸಾಲು ಸಾಲು ಆರೋಪ – ಬೇಲೂರು ಶಿಕ್ಷಣಾಧಿಕಾರಿ ಅಮಾನತು
