ಮಧ್ಯಪ್ರದೇಶಲ್ಲಿ ಜೆಸಿಬಿ ಘರ್ಜನೆ – ರಾಮನವಮಿ ಕಲ್ಲುತೂರಾಟ, 20 ಅಕ್ರಮ ಕಟ್ಟಡಗಳು ನೆಲಸಮ

ಭೋಪಾಲ್: ಭಾನುವಾರ ರಾಮನವಮಿ ಮೆರವಣಿಗೆ ವೇಳೆ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಸೋಮವಾರ 20 ಅಕ್ರಮ ಕಟ್ಟಡ ಹಾಗೂ ಅಂಗಡಿಗಳನ್ನು ನೆಲಸಮಗೊಳಿಸಿ ಬಿಸಿ ಮುಟ್ಟಿಸಿದೆ.

ನಗರದ ಛೋಟೆ ಮೋಹನ್ ಟಾಕೀಸ್ ಪ್ರದೇಶದಿಂದ ಧ್ವಂಸ ಕಾರ್ಯ ಆರಂಭಗೊಂಡು, ನಾಲ್ಕು ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. ಇದಾದ ಕೆಲವೇ ಹೊತ್ತಲ್ಲಿ ಆನಂದ್ ನಗರ ಮತ್ತು ಖಾಸ್ಖಾಸ್ವಾಡಿಯಲ್ಲಿ ಅಕ್ರಮ ಕಟ್ಟಡಗಳನ್ನು ಕೆಡವಲಾಯಿತು. ಇದನ್ನೂ ಓದಿ: ರಾಮನವಮಿ ರ‍್ಯಾಲಿ ವೇಳೆ ಕೋಮುಸಂಘರ್ಷ: 4 ರಾಜ್ಯಗಳಲ್ಲಿ ನಡೆದಿದ್ದೇನು?

ಕೆಡವಲಾದ ಎಲ್ಲಾ ಅಂಗಡಿಗಳು ಹಾಗೂ ಮನೆಗಳು ಅತಿಕ್ರಮಣ ಮಾಡಲಾದ ಭೂಮಿಯಲ್ಲಿ ನಿರ್ಮಿಸಲಾದ ಕಟ್ಟಡಗಳಾಗಿವೆ. ಈ ಪ್ರದೇಶಗಳಲ್ಲಿ ಕಲ್ಲು ತೂರಾಟ ವರದಿಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಅಕ್ರಮ ಕಟ್ಟಡಗಳನ್ನು ಕೆಡವಲಾಗಿದೆ ಎಂದು ವಕೀಲರು ತಿಳಿಸಿದ್ದಾರೆ.

ರಾಮನವಮಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ 84 ಜನರನ್ನು ಬಂಧಿಸಲಾಗಿದೆ. ಅವರಿಗೆ ತಕ್ಕ ಪಾಠ ಕಲಿಸಲು, ಅವರ ಅಕ್ರಮ ಆಸ್ತಿಗಳನ್ನು ನೆಲಸಮ ಮಾಡಲಾಗುತ್ತಿದೆ ಎಂದು ಕಮಿಷನರ್ ಡಾ. ಪವನ್ ಕುಮಾರ್ ಶರ್ಮಾ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವದಂತಿಗಳನ್ನು ಹರಡಿದ್ದಕ್ಕಾಗಿ ರಾಜ್ಯ ಸರ್ಕಾರದ ಮೂವರು ಗುತ್ತಿಗೆ ನೌಕರರನ್ನು ವಜಾ ಮಾಡಿದ್ದರೆ ಒಬ್ಬ ನೌಕರರನ್ನು ಅಮಾನತುಗೊಳಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ಇದು ಅತ್ಯಾಚಾರವೋ? ಅಥವಾ ಅವಳು ಗರ್ಭಿಣಿಯೋ?: ಮಮತಾ ಬ್ಯಾನರ್ಜಿ ಪ್ರಶ್ನೆ

ಭಾನುವಾರ ರಾತ್ರಿ ನಡೆದ ಹಿಂಸಾಚಾರದ ಹಿನ್ನೆಲೆ ಖಾರ್ಗೋನ್ ಶಾಸಕ ರವಿ ಜೋಶಿ ಸ್ಥಳಕ್ಕೆ ಭೇಟಿ ನೀಡಿ, ಹಿಂಸಾಚಾರಕ್ಕೆ ಪೊಲೀಸರ ವೈಫಲ್ಯವೇ ಕಾರಣ. ಇಂತಹ ಬೃಹತ್ ರ‍್ಯಾಲಿಯಲ್ಲಿ ಸಾಕಷ್ಟು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕಿತ್ತು. ಇದರಿಂದಾಗಿ ಪರಿಸ್ಥಿತಿ ಕೈಮೀರಿದೆ ಎಂದು ಆರೋಪಿಸಿದ್ದಾರೆ.

Comments

Leave a Reply

Your email address will not be published. Required fields are marked *