ಬದಲಾದ ವಾತಾವರಣದಿಂದ ಮಕ್ಕಳಲ್ಲಿ ಕಾಯಿಲೆ ಹೆಚ್ಚಾಗಿದೆ: ಡಿಎಚ್‍ಓ ಡಾ.ನಾಗರಾಜ್

ರಾಯಚೂರು: ಜಿಲ್ಲೆಯಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದ್ದು, ಬದಲಾದ ವಾತಾವರಣದಿಂದ ಮಕ್ಕಳಲ್ಲಿ ಕಾಯಿಲೆಗಳು ಹೆಚ್ಚಾಗಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ನಾಗರಾಜ್ ಹೇಳಿದ್ದಾರೆ.

ಜಿಲ್ಲೆಯಲ್ಲಿ ಈವರೆಗೂ 994 ಡೆಂಗ್ಯೂ ಶಂಕಿತ ಪ್ರಕರಣಗಳಲ್ಲಿ 40 ಪ್ರಕರಣ ದೃಢಪಟ್ಟಿವೆ. ವಾತಾವರಣ ಬದಲಾವಣೆಯಿಂದ ಮಕ್ಕಳಲ್ಲಿ ಸೋಂಕಿನ ಪ್ರಮಾಣ ಜಾಸ್ತಿಯಾಗುತ್ತಿದೆ ಅಂತ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಾನು ಯಾರ ಬೂಟೂ ನೆಕ್ಕಿಲ್ಲ – ಬೊಮ್ಮಾಯಿಗೆ ಸುಬ್ರಮಣಿಯನ್ ಸ್ವಾಮಿ ತಿರುಗೇಟು

ಕೊರೊನಾ 3ನೇ ಅಲೆ ಆತಂಕದ ನಡುವೆಯೇ ಜಿಲ್ಲೆಯಲ್ಲಿ ಚಿಕ್ಕಮಕ್ಕಳನ್ನ ಡೆಂಗ್ಯೂ, ನ್ಯೂಮೋನಿಯಾ ಕಾಡುತ್ತಿವೆ. ಈಗ ರಾಜ್ಯದಲ್ಲಿ ವಾತಾವರಣ ಬದಲಾಗಿರುವುದರಿಂದ ಜ್ವರ, ಕೆಮ್ಮು, ನೆಗಡಿ ಹಾಗೂ ಉಸಿರಾಟ ತೊಂದರೆ ಕಾಯಿಲೆಗಳಿಂದ ಮಕ್ಕಳು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮಕ್ಕಳಿಗೆ ಕೋವಿಡ್ ತಪಾಸಣೆ ಮಾಡಿದಾಗ ಇದುವರೆಗೆ ಯಾವುದೇ ಪಾಸಿಟಿವ್ ಪ್ರಕರಣ ದಾಖಲಾಗಿಲ್ಲ. ಹೀಗಾಗಿ ಪೋಷಕರು ಆತಂಕಕ್ಕೆ ಒಳಗಾಗಬೇಕಿಲ್ಲ ಎಂದರು. ಇದನ್ನೂ ಓದಿ: ಅಯ್ಯೋ ಮಗನೇ, ಆ ದೇವರು ನಿನ್ನ ಬದಲು ನನ್ನನ್ನು ಕರೆದುಕೊಳ್ಳಬೇಕಿತ್ತು

ವೈರಲ್ ಫೀವರ್ ಹೆಚ್ಚಾಗಿರುವುದರಿಂದ ಕೋವಿಡ್‍ಗೆ ಸಂಬಂಧಿತ ತಪಾಸಣೆ ಹಾಗೂ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಅಂತ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗರಾಜ್ ಹೇಳಿದ್ದಾರೆ.

 

Comments

Leave a Reply

Your email address will not be published. Required fields are marked *