ಬಿಜೆಪಿ ಅವರದ್ದು ಬಿಚ್ಚೋ ಕಾಲ ಬರುತ್ತೆ, ಬಿಚ್ತೀನಿ: ಡಿಕೆಶಿ ತಿರುಗೇಟು

ಬೆಂಗಳೂರು: ಬಿಜೆಪಿ (BJP) ಅವರದ್ದು ಬಿಚ್ಚೋ ಕಾಲ ಬರುತ್ತೆ, ಬಿಚ್ತೀನಿ ಎಂದು ಬಿಜೆಪಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (D.K.Shivakumar) ತಿರುಗೇಟು ನೀಡಿದ್ದಾರೆ.

ನಿನ್ನೆ ಬಿಜೆಪಿಯಿಂದ ಚಾರ್ಜ್‌ಶೀಟ್ ಬಿಡುಗಡೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದು, ಇವರದ್ದು ಬಿಚ್ಚೋ ಕಾಲ ಬರುತ್ತೆ, ಬಿಚ್ತೀನಿ ಅಂತ ಟಾಂಗ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ಗಾಸಿಪ್‌ಗಾಗಿಯೇ 4 ಮನೆಗಳಿವೆ – ರೇಣುಕಾಚಾರ್ಯಗೆ ಶಾಸಕ‌ ಯತ್ನಾಳ್‌ ಟಾಂಗ್

ಬಿಜೆಪಿ ಅವರಿಗೆ ನಾಯಕನನ್ನೇ ಆಯ್ಕೆ ಮಾಡಲಾಗಿಲ್ಲ. ಕಂಟ್ರಾಕ್ಟರ್ಸ್ ಬಗ್ಗೆ ಹೇಳಿ ನನ್ನ ವಿರುದ್ಧ ಆರೋಪ ಮಾಡಿದರು. ನಾನು ಸವಾಲು ಹಾಕಿದ್ದೇನೆ. ನನ್ನ ಮೇಲಿನ ಆರೋಪ ಸಾಬೀತು ಮಾಡಿ. ರಾಜಕೀಯ ನಿವೃತ್ತಿ ಪಡೆಯುವುದಾಗಿ ಹೇಳಿದ್ದೇನಲ್ಲವೇ? ಇದಕ್ಕಿಂತ ಇನ್ನೇನು ಬೇಕು ಎಂದು ತಿಳಿಸಿದ್ದಾರೆ.

ನೂರು ದಿನದಲ್ಲಿ ನಾಲ್ಕು ಗ್ಯಾರಂಟಿ ಜಾರಿ ಮಾಡಿದ್ದೇವೆ. ಮೊದಲ ಕ್ಯಾಬಿನೆಟ್‌ನಲ್ಲೇ ಎಲ್ಲ ಗ್ಯಾರಂಟಿ ಇತ್ಯರ್ಥ ಮಾಡಿದ್ದೇವೆ. ಇದುವರೆಗೂ ಯಾರಾದರು ಮಾಡಿದ್ದಾರಾ? ಅವರದ್ದು ಭರವಸೆ, ನಮ್ಮದು ಗ್ಯಾರಂಟಿ ಎಂದು ಬಿಜೆಪಿ ನಾಯಕರಿಗೆ ಚಾಟಿ ಬೀಸಿದ್ದಾರೆ. ಇದನ್ನೂ ಓದಿ: ಕಾವೇರಿ ನೀರು ಬಿಡುಗಡೆ ವಿಚಾರ- ಗುರುವಾರ ಡಿಕೆಶಿ ದೆಹಲಿಗೆ

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು 100 ದಿನಗಳನ್ನು ಪೂರೈಸಿದೆ. ಆ ಸಂಭ್ರಮದಲ್ಲಿ ಕಾಂಗ್ರೆಸ್‌ ನಾಯಕರಿದ್ದಾರೆ. ಆದರೆ ಇದನ್ನು ಬಿಜೆಪಿ ನಾಯಕರು ಗೇಲಿ ಮಾಡಿದ್ದರು. ಅಲ್ಲದೇ ಕಾಂಗ್ರೆಸ್‌ ಆಡಳಿತವನ್ನು ವ್ಯಂಗ್ಯ ಮಾಡಿ ಚಾರ್ಜ್‌ಶೀಟ್‌ ಬಿಡುಗಡೆ ಮಾಡಿದ್ದರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]