ಅಮೆರಿಕ ಮಾದರಿ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿ: ನಿತಿನ್ ಗಡ್ಕರಿ ಭರವಸೆ

ಬೆಳಗಾವಿ: ಭಾರತದ ರಸ್ತೆ ಜಾಲವನ್ನು 2024ರ ವೇಳೆಗೆ ಅಮೆರಿಕಕ್ಕೆ ಸರಿಸಮನಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ್ದೇನೆ. ಪ್ರತಿಯೊಂದು ಅಭಿವೃದ್ಧಿಯು ರಸ್ತೆ ಸಂಪರ್ಕವನ್ನು ಅವಲಂಬಿಸಿದೆ. ಆದ್ದರಿಂದ ರಸ್ತೆ ಸಂಪರ್ಕ ಜಾಲವನ್ನು ಸದೃಢಗೊಳಿಸಲು ಸರಕಾರ ಬದ್ಧವಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಭಾರತ ಮಾಲಾ-2 ಯೋಜನೆಯಲ್ಲಿ ಈ ಭಾಗದ ಇನ್ನಷ್ಟು ಯೋಜನೆಗಳನ್ನು ಸೇರ್ಪಡೆ ಮಾಡಲಾಗುವುದು. ಹೊಸ ಮೇಲ್ಸೆತುವೆ ಪ್ರಸ್ತಾವವನ್ನು ಅಭಯ್ ಪಾಟೀಲ ನೀಡಿದ್ದರು. ಆದರೆ, ಸ್ಥಳೀಯ ಕಾರಣಗಳಿಂದ ಅದು ಸಾಧ್ಯವಾಗಿರುವುದಿಲ್ಲ. ಸ್ಥಳೀಯವಾಗಿ ಅಗತ್ಯ ಸಹಕಾರ ನೀಡಿದರೆ ಮುಂದುವರಿಸಲಾಗುವುದು ಎಂದರು.

ಈ ಭಾಗದ ಸಂಸದರು, ಶಾಸಕರು ವಿವಿಧ ರಸ್ತೆಗಳ ಅಭಿವೃದ್ಧಿ ಮಾಡಲು ಹಾಗೂ ಮೇಲ್ದರ್ಜೆಗೇರಿಸಲು ಮನವಿ ಸಲ್ಲಿಸಿದ್ದು, ಈ ಎಲ್ಲ ಪ್ರಸ್ತಾವನೆಗಳಿಗೆ ತಕ್ಷಣವೇ ಮಂಜೂರಾತಿ ನೀಡಲಾಗುವುದು. 9 ಸಾವಿರ ಕಿ.ಮೀ. ಉದ್ದದ ಗ್ರೀನಫೀಲ್ಡ್ ಹಾಗೂ ಹೆದ್ದಾರಿ ಕಾರಿಡಾರ್ ಯೋಜನೆಯನ್ನು 3ಲಕ್ಷ ಕೋಟಿಗೂ ಅಧಿಕ ವೆಚ್ಚದಲ್ಲಿ ಜಾರಿಗೊಳಿಸಲಾಗುತ್ತಿದೆ. ಇದರಲ್ಲಿ ಬೆಂಗಳೂರು-ಚೆನೈ ಯೋಜನೆ ಕೂಡ ಒಳಗೊಂಡಿದೆ. ದೆಹಲಿ-ಮುಂಬೈ ಹೆದ್ದಾರಿಯಲ್ಲಿ 120 ಕಿ.ಮೀ.ವೇಗದಲ್ಲಿ ವಾಹನ ಚಲಾಯಿಸಬಹುದು. ಇದರಿಂದ ಎರಡು ನಗರಗಳ ನಡುವಿನ ಪ್ರಯಾಣ ಅವಧಿ 12ಗಂಟೆಯಾಗಲಿದೆ. ಇದನ್ನೂ ಓದಿ: ವಿದ್ಯುತ್ ಪೂರೈಕೆ ಉಚಿತವಲ್ಲ, ಬಿಲ್ ಪಾವತಿಸದಿದ್ದರೆ ಕರೆಂಟ್ ಕಟ್ : ನಿತಿನ್ ರಾವತ್

Nitin Gadkari

ಬೆಂಗಳೂರು ಟ್ರಾಫಿಕ್ ಹಾಗೂ ನಗರೀಕರಣ ಒತ್ತಡವನ್ನು ನಿಯಂತ್ರಿಸುವ ದೃಷ್ಟಿಯಿಂದ ಹೆದ್ದಾರಿಗಳ ಪಕ್ಕದಲ್ಲಿ ಭೂಸ್ವಾಧೀನ ಮಾಡಿಕೊಂಡು ಸ್ಮಾರ್ಟ್ ವಿಲೇಜ್ ಹಾಗೂ ಕೈಗಾರಿಕೆ ಸ್ಥಾಪಿಸುವ ಮೂಲಕ ಪರ್ಯಾಯ ಮಾರ್ಗವನ್ನು ಕಂಡುಕೊಳ್ಳಬಹುದು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಯೋಜನೆ ರೂಪಿಸಿದರೆ ಕೇಂದ್ರ ಸರಕಾರದ ವತಿಯಿಂದ ಎಲ್ಲ ರೀತಿಯ ನೆರವು ನೀಡಲಾಗುವುದು.ಇದರಜೊತೆಗೆ ರಾಜ್ಯ ಸರಕಾರವು ಅಗತ್ಯ ರಸ್ತೆ ಯೋಜನೆಗಳಿಗೆ ಭೂಸ್ವಾಧೀನವನ್ನು ಮಾಡಿಕೊಟ್ಟರೆ ರಾಜ್ಯದಲ್ಲಿ ಪ್ರವಾಸೋದ್ಯಮ ಹಾಗೂ ಕೈಗಾರಿಕೆಗಳ ಅಭಿವೃದ್ಧಿಗೆ ಪೂರಕವಾದ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುವುದು ಎಂದು ಸಚಿವ ನಿತಿನ್ ಗಡ್ಕರಿ ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ ರಾಜಕೀಯ ಕಾರಣಕ್ಕೆ ಮೇಕೆದಾಟು ಪಾದಯಾತ್ರೆ ಮಾಡುತ್ತಿದೆ : ಕೋಟಾ ಶ್ರೀನಿವಾಸ್ ಪೂಜಾರಿ

ಪುಣೆ-ಬೆಂಗಳೂರು ಹೆದ್ದಾರಿ ಅಂತರ ಕಡಿಮೆಗೊಳಿಸಲಿದೆ. ಭಾರತ ಮಾಲಾ-2 ಯೋಜನೆಯಲ್ಲಿರುವ ಪುಣೆ-ಬೆಂಗಳೂರು ರಸ್ತೆಯ ಈಗಿನ ಅಂತರವನ್ನು 100 ಕಿ.ಮೀ. ಕಡಿಮೆಗೊಳಿಸುವ ಯೋಜನೆ ರೂಪಿಸಲಾಗಿದೆ. ಮುಂದೆ ಇದು ಬೆಂಗಳೂರು-ಚೆನೈ ಹೆದ್ದಾರಿಗೆ ಸಂಪರ್ಕ ಕಲ್ಪಿಸಲಿದೆ ಎಂದು ವಿವರಿಸಿದರು. ಇದೇ ವೇಳೆ ಬೆಳಗಾವಿ-ಸಂಕೇಶ್ವರ ಬೈಪಾಸ್, ಸಂಕೇಶ್ವರ ಬೈಪಾಸ್-ಮಹಾರಾಷ್ಟ್ರ ಗಡಿಯವರೆಗೆ ಷಟ್ಪಥ ನಿರ್ಮಾಣ ಕಾಮಗಾರಿ; ಚೋರ್ಲಾ-ಜಾಂಬೋಟಿ-ಬೆಳಗಾವಿ ನಡುವಿನ ದ್ವಿಪಥ ಕಾಮಗಾರಿಗಳು ಚಾಲನೆ ನೀಡಲಾಗಿದೆ. ಇದರ ಜೊತೆಗೆ ವಿಜಯಪುರ-ಮುರಗುಂಡಿ(ಎನ್.ಎಚ್.548ಬಿ) ಹಾಗೂ ಸಿದ್ದಾಪುರ-ವಿಜಯಪುರ(ಎನ್.ಎಚ್.561ಎ) ಕಾಮಗಾರಿಗಳಿಗೆ ಕೇಂದ್ರ ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಇದನ್ನೂ ಓದಿ: ಯುದ್ಧ ಭೂಮಿಯಿಂದ ಇನ್ನೂ ಬಾರದ ಮಗಳ ನೆನೆದೆ ಇಡೀ ಕುಟುಂಬ ಕಣ್ಣೀರು

Comments

Leave a Reply

Your email address will not be published. Required fields are marked *