ಮಂಗಳೂರು: ಧರ್ಮಸ್ಥಳದ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ಅಮೃತವರ್ಷಿಣಿ ಸಭಾಂಗಣದಲ್ಲಿ ಹಾಕಲಾಗಿದ್ದ ಬೃಹತ್ ಪೆಂಡಾಲ್ ಕುಸಿದು ಬಿದ್ದು ಸುಮಾರು 10 ಮಂದಿ ಗಾಯಗೊಂಡಿದ್ದಾರೆ.
ಪಂಚಮಹಾವೈಭವ ಕಾರ್ಯಕ್ರಮ ವೀಕ್ಷಣೆಗಾಗಿ ದೇವಾಲಯದ ಪಾರ್ಕಿಂಗ್ ಜಾಗದ ಬಳಿ ಇರುವ ಅಮೃತವರ್ಷಿಣಿ ಸಭಾಂಗಣದಲ್ಲಿ ಬೃಹತ್ ಪೆಂಡಾಲ್ ಅನ್ನು ಹಾಕಲಾಗಿತ್ತು. ಈ ಪೆಂಡಾಲ್ ಗುರುವಾರ ಮಧ್ಯಾಹ್ನ ಏಕಾಏಕಿ ಕುಸಿದು ಬಿದ್ದಿದೆ.

ಮಧ್ಯಾಹ್ನ ಬಿಸಿಲು ಇದ್ದರಿಂದ ಕೆಲವರು ಪೆಂಡಾಲ್ ಕೆಳಗೆ ಕುಳಿತ್ತಿದ್ದಾಗ ಅವಘಡ ಸಂಭವಿಸಿದೆ. ಒಂದು ವೇಳೆ ಕಾರ್ಯಕ್ರಮ ನಡೆಯುತ್ತಿದ್ದಾಗ ಕುಸಿದಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆಯಿತ್ತು. ಅದೃಷ್ಟವಶಾತ್ ಮಧ್ಯಾಹ್ನವೇ ಈ ಅವಘಡ ಸಂಭವಿಸಿದ್ದರಿಂದ ಭಾರೀ ಅನಾಹುತ ಕೈತಪ್ಪಿದೆ ಎಂದು ಸ್ಥಳದಲ್ಲಿದ್ದ ಜನ ತಿಳಿಸಿದ್ದಾರೆ.
ಘಟನೆಯಿಂದಾಗಿ ಸುಮಾರು 10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೆಂಡಾಲ್ ಕುಸಿಯುವಷ್ಟು ಜೋರಾಗಿ ಗಾಳಿ ಇರಲಿಲ್ಲ. ಪೆಂಡಾಲ್ ಅನ್ನು ಸರಿಯಾಗಿ ಕಟ್ಟದ ಕಾರಣ ಕುಸಿದಿರಬಹುದು ಎಂದು ಸ್ಥಳೀಯ ಜನ ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply