ಧರ್ಮಸ್ಥಳ ಬುರುಡೆ ರಹಸ್ಯ – ದಾಖಲೆ ಸಂಗ್ರಹಿಸುವ ಕೆಲಸ ಆರಂಭಿಸಿದ NHRC

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವ (Dharmasthala Mass Burial Probe) ಹೂತಿಟ್ಟ ದೂರಿನ ಹಿನ್ನೆಲೆ ಮಾನವ ಹಕ್ಕುಗಳ ಆಯೋಗ (NHRC) ತನ್ನ ಕೆಲಸ ಆರಂಭಿಸಿದೆ. ಧರ್ಮಸ್ಥಳ ಗ್ರಾಮ ಪಂಚಾಯತ್‌ಗೆ ಆಯೋಗದ ಅಧಿಕಾರಿಗಳ ಭೇಟಿ ನೀಡಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಬಿಡು ಬಿಟ್ಟ ನಾಲ್ವರು ಅಧಿಕಾರಿಗಳ ತಂಡದಲ್ಲಿಓರ್ವ ಐಪಿಎಸ್ ಅಧಿಕಾರಿ ಇದ್ದಾರೆ. ವಿವಿಧ ಆಯಾಮಗಳಲ್ಲಿ ದಾಖಲೆ ಮತ್ತು ಮಾಹಿತಿಗಳ ಸಂಗ್ರಹ ಮಾಡುತ್ತಿರುವ ತಂಡ ಪಂಚಾಯತ್‌ನಿಂದ ದಾಖಲೆಗಳನ್ನು ಕೇಳಿ ಪರಿಶೀಲನೆ ನಡೆಸುತ್ತಿದೆ.

 

ಮುಂದಿನ ನಾಲ್ಕೈದು ದಿನ ಧರ್ಮಸ್ಥಳದಲ್ಲಿ ಬಿಡು ಬಿಡಲಿರುವ ಮಾನವ ಹಕ್ಕುಗಳ ಆಯೋಗ ಸ್ವಚ್ಛತಾ ಕಾರ್ಮಿಕರಿಂದ ಹೇಳಿಕೆಗಳ ಸಂಗ್ರಹ ಮಾಡಲಿದೆ. ಗೌಪ್ಯವಾಗಿ ಹಲವರ ಭೇಟಿ ಮಾಡಿ ವಿಚಾರಣೆ ಆಯೋಗ ವಿಚಾರಣೆ ನಡೆಸಲಿದೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | SIT ಭೇಟಿಯಾದ ಪದ್ಮಲತಾ ಕುಟುಂಬ 38 ವರ್ಷಗಳ ಹಳೆಯ ಕೇಸ್ ತನಿಖೆಗೆ ಒತ್ತಾಯ

ಎಸ್‌ಐಟಿ ಪೊಲೀಸ್ ಸ್ಟೇಷನ್, ಬೆಳ್ತಂಗಡಿ ಪೊಲೀಸ್ ಸ್ಟೇಷನ್, ಶವ ಹೂತಿಟ್ಟ ಪಾಯಿಂಟ್‌ಗಳಿಗೆ ಭೇಟಿ ಪರಿಶೀಲನೆ ಮಾಡಲಿದೆ.