ಸಿಎಂ ಎಚ್‍ಡಿಕೆಗೆ ಧನ್ಯವಾದ ತಿಳಿಸಿದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಬೆಂಗಳೂರು: ಧರ್ಮಸ್ಥಳದಲ್ಲಿ ನೀರಿನ ಅಭಾವಕ್ಕೆ ಸ್ಪಂಧಿಸಿರುವ ಸಿಎಂ ಕುಮಾರಸ್ವಾಮಿ ಅವರ ನಡೆಗೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಕೃತಜ್ಞತೆ ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ಅಭಾವ ಕಂಡು ಬಂದ ತಕ್ಷಣ ನಿಮ್ಮ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮತ್ತು ಜಲವಾಹಿನಿ ಮಂಡಳಿ ಮತ್ತು ಸಣ್ಣ ನೀರಾವರಿ ಯೋಜನೆಯ ಅಧಿಕಾರಿಗಳು ಧರ್ಮಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನ ಗಮನಿಸಿ ಸರ್ಕಾರಕ್ಕೆ ವರದಿ ನೀಡಿದ್ದಾರೆ.

ನಮ್ಮ ಕೋರಿಕೆಯಂತೆ ಕುಡಿಯುವ ನೀರಿನ ಕೊರತೆ ಸಮಸ್ಯೆಗೆ ಪರಿಹಾರವಾಗಿ ನೇತ್ರಾವತಿ ಮತ್ತು ನೆರಿಯ ನದಿಗೆ 2 ಕಿಂಡಿ ಅಣೆಕಟ್ಟು ನಿರ್ಮಿಸಲು 7 ಕೋಟಿ ಮಂಜೂರು ಮಾಡುವುದು ಸಂತೋಷವಾಗಿದೆ. ಇದೇ ಸಂದರ್ಭದಲ್ಲಿ ಬೆಂಬಲ ನೀಡಿದ ರಾಜ್ಯದ ಜನತೆಗೆ ಕೃತ್ಯಜ್ಞತೆಗಳು, ಮಂಜುನಾಥ ಸ್ವಾಮಿ ನಿಮಗೆ ದೀರ್ಘಾಯುರಾರೋಗ್ಯ ಸಕಲ ಸನ್ಮಂಗಲವನ್ನುಂಟು ಮಾಡಲಿ ಹಾಗೂ ನಿಮ್ಮ ದಕ್ಷ ನೇತೃತ್ವದಲ್ಲಿ ಸರ್ಕಾರ ಯಶಸ್ವಿಯಾಗಿ ಆಡಳಿತ ನಡೆಸುವಂತೆ ಹರಸಲೆಂದು ಪ್ರಾರ್ಥನೆ ಸಲ್ಲಿಸುತ್ತೇನೆ ಪತ್ರದಲ್ಲಿ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *