ಭಾರತ್ ಮಾತಾ ಕೀ ಜೈ ಎಂದವರಿಗೆ ಮಾತ್ರ ಭಾರತದಲ್ಲಿರಲು ಅವಕಾಶ – ಧರ್ಮೇಂದ್ರ ಪ್ರಧಾನ್

ಮುಂಬೈ: ಭಾರತ್ ಮಾತಾ ಕೀ ಜೈ ಎಂದವರಿಗೆ ಮಾತ್ರ ಭಾರತದಲ್ಲಿರಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಪುಣೆಯಲ್ಲಿ ನಡೆದ ಎಬಿವಿಪಿಯ 54ನೇ ರಾಜ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಭಗತ್ ಸಿಂಗ್ ಹಾಗೂ ನೇತಾಜಿ ಸುಭಾಷ್ ಚಂದ್ರ ಭೋಸ್ ಅವರು ದೇಶಕ್ಕಾಗಿ ತಮ್ಮ ಜೀವನವನ್ನು ತ್ಯಾಗ ಮಾಡಿಲ್ಲ ಎಂದು ಭಾವಿಸಿ ಕೆಲವರು ಭಾರತವನ್ನು ಧರ್ಮಶಾಲೆ ಮಾಡಲು ಹೊರಟಿದ್ದಾರೆ. ಇದರಿಂದ ಭಗತ್ ಸಿಂಗ್, ಸುಭಾಷ್ ಚಂದ್ರ ಭೋಸ್ ಅವರ ತ್ಯಾಗ ವ್ಯರ್ಥವಾಗುವುದಿಲ್ಲವೇ? ಅವರು ಏಕೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು ಎಂದು ನಾವು ನೆನೆಯಬೇಕಿದೆ. ಅಂದರೆ ನಾವು ಭಾರತವನ್ನು ಧರ್ಮಶಾಲೆಯನ್ನಾಗಿ ಪರಿವರ್ತಿಸಲು ಹೊರಟಿದ್ದೇವೆಯೇ ಎಂದು ಪ್ರಶ್ನಿಸಿದ್ದಾರೆ.

ಯಾರು ಬರುತ್ತಾರೋ ಬಂದು ಇಲ್ಲಿ ನೆಲೆಸಲಿ. ಈ ಕುರಿತು ನಾವು ಸವಾಲು ಸ್ವೀಕರಿಸಲು ಸಿದ್ಧರಿದ್ದೇವೆ. ಆದರೆ ಭಾರತದಲ್ಲಿ ಇರಲು ಬಯಸುವವರು ಭಾರತ್ ಮಾತಾ ಕೀ ಜೈ ಎಂದು ಹೇಳುವುದನ್ನು ಕಡ್ಡಾಯಗೊಳಿಸಬೇಕಿದೆ. ನಾವಿದನ್ನು ಸ್ಪಷ್ಟಪಡಿಸಬೇಕು, ಅಂತಹವರಿಗೆ ಮಾತ್ರ ಭಾರತದಕಲ್ಲಿರಲು ಅವಕಾಶ ನೀಡಬೇಕಿದೆ ಎಂದು ತಿಳಿಸಿದ್ದಾರೆ.

ಎನ್‍ಆರ್ ಸಿ ಹಾಗೂ ಸಿಎಎ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ್ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಧಾರ್ಮಿಕತೆ ಆಧಾರದ ಮೇಲೆ ಪೌರತ್ವ ನೀಡುವ ಕಾನೂನನ್ನು ಹಿಂಪಡೆಯಬೇಕೆಂದು ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ.

Comments

Leave a Reply

Your email address will not be published. Required fields are marked *