ಧಾರವಾಡ ಎಸ್‍ಡಿಎಂ ಕಾಲೇಜಿನಲ್ಲಿ ಮತ್ತೆ ಕೊರೊನಾ ಸ್ಫೋಟ – 77 ಮಂದಿಗೆ ಸೋಂಕು

ಧಾರವಾಡ: ಕಳೆದೆರಡು ದಿನಗಳಿಂದ ಧಾರವಾಡದ ಎಸ್‍ಡಿಎಂ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಸೋಂಕಿತರ ಸಂಖ್ಯೆ ಅಧಿಕವಾಗಿದ್ದು, ಇಂದು ಮತ್ತೆ ಕೊರೊನಾ ಸ್ಫೋಟಗೊಂಡಿದೆ. ಇಂದು 77 ಜನರಲ್ಲಿ ಕೊವಿಡ್ ಪಾಸಿಟಿವ್ ದೃಢವಾಗಿದೆ.

ಕಳೆದ ಎರಡು ದಿನಗಳಲ್ಲಿ 204 ಜನರಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು. ಇಂದು 77 ಪ್ರಕರಣಗಳು ಸೇರಿ ಒಟ್ಟು 281 ಕೋವಿಡ್ ಪ್ರಕರಣಗಳು ದಾಖಲಾಗಿವೆ. ಸೋಂಕಿತರೆಲ್ಲರಿಗೂ ಸರಿಯಾದ ರೀತಿಯಲ್ಲಿ ಚಿಕಿತ್ಸೆ, ಔಷಧೋಪಚಾರ ನಡೆಯುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಮಾಹಿತಿ ನೀಡಿದರು. ಇದನ್ನೂ ಓದಿ:  ನನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ: ನವಾಬ್ ಮಲಿಕ್

ನ.17ರಂದು ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವವರೆಗೆಲ್ಲಗೂ ತಪಾಸಣೆ ಮಾಡಿಕೊಳ್ಳಲು ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ತಪಾಸಣೆಗೆ ಒಳಪಟ್ಟವರನ್ನು ಪ್ರತ್ಯೇಕವಾಗಿ ಇರಲು ವ್ಯವಸ್ಥೆ ಮಾಡಲಾಗಿದೆ. ಇನ್ನೂ 1,822 ಜನರ ತಪಾಸಣಾ ವರದಿಗಳು ಬರಬೇಕಾಗಿದೆ.

ಕಿಮ್ಸ್, ಡೆಮಾನ್ಸ್, ಎಸ್‍ಡಿಎಂ ಆಸ್ಪತ್ರೆಯ ಪ್ರಯೋಗಾಲಯದಲ್ಲಿ ಈ ಮಾದರಿಗಳನ್ನು ಪರೀಕ್ಷಿಸಲಾಗುತ್ತಿದೆ. ಕೋವಿಡ್ ಲಸಿಕೆಯ 2 ಡೋಸ್ ಪಡೆದಿರುವುದರಿಂದ ಸೋಂಕಿತರಲ್ಲಿ ಸೋಂಕಿನ ಗಂಭೀರ ಸ್ವರೂಪ ಲಕ್ಷಣ ಕಾಣಿಸಿಕೊಂಡಿಲ್ಲ.

Comments

Leave a Reply

Your email address will not be published. Required fields are marked *