ಚೆನ್ನೈ ನಾಯಕತ್ವ ತೊರೆದ ರವೀಂದ್ರ ಜಡೇಜಾ – ಧೋನಿಗೆ ಮತ್ತೆ ಪಟ್ಟ

ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾ ತೊರೆದಿದ್ದಾರೆ. ಆ ಬಳಿಕ ಇದೀಗ ಮಹೇಂದ್ರ ಸಿಂಗ್ ಧೋನಿಗೆ ಮತ್ತೆ ನಾಯಕತ್ವದ ಪಟ್ಟ ಕಟ್ಟಲಾಗಿದೆ.

15ನೇ ಆವೃತ್ತಿ ಐಪಿಎಲ್ ಆರಂಭಕ್ಕೂ ಮುನ್ನ ಧೋನಿ, ಆಲ್‍ರೌಂಡರ್ ಜಡೇಜಾಗೆ ನಾಯಕತ್ವ ವಹಿಸಿದ್ದರು. ಆದರೆ ಜಡೇಜಾ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀನಾಯ ಪ್ರದರ್ಶನ ತೋರಿ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಈ ಬಗ್ಗೆ ಸಿಎಸ್‍ಕೆ ತಮ್ಮ ಅಧಿಕೃತ ಟ್ವಟ್ಟರ್ ಖಾತೆಯಲ್ಲಿ ತಿಳಿಸಿದ್ದು, ಚೆನ್ನೈ ಸೂಪರ್ ಕಿಂಗ್ಸ್‌ನ  ನಾಯಕತ್ವವನ್ನು ರವೀಂದ್ರ ಜಡೆಜಾ ತೊರೆದಿದ್ದು, ಎಂ.ಎಸ್. ಧೋನಿ ಅವರು ನೂತನವಾಗಿ ನಾಯಕರಾಗಿದ್ದಾರೆ ಎಂದು ತಿಳಿಸಿದೆ. ಇದನ್ನೂ ಓದಿ: ಚೇತನ್ ಸಕಾರಿಯಾ ‘ಡ್ರ್ಯಾಗನ್ ಬಾಲ್ Z’ ಸಂಭ್ರಮಾಚರಣೆ ಹಿಂದಿದೆ ಭಾವನಾತ್ಮಕ ಸಂಬಂಧ

CSK

ಚೆನ್ನೈ ತಂಡ 15ನೇ ಆವೃತ್ತಿ ಐಪಿಎಲ್‍ನಲ್ಲಿ ಒಟ್ಟು 8 ಪಂದ್ಯಗಳನ್ನು ಆಡಿದ್ದು, 2 ಜಯ ಮತ್ತು 6 ಸೋಲು ಕಂಡು 4 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಈಗಾಗಲೇ ಬಹುತೇಕ ಪ್ಲೆ ಆಫ್ ಅವಕಾಶ ಕಳೆದುಕೊಂಡಿರುವ ಚೆನ್ನೈ ಇನ್ನುಳಿದ ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಮೇಲೆರುವ  ಪ್ರಯತ್ನದಲ್ಲಿದೆ. ಇದನ್ನೂ ಓದಿ: ಗುಜರಾತ್‌ ಟೈಟನ್ಸ್‌ಗೆ ರೋಚಕ ಜಯ – ಬಹುತೇಕ ಪ್ಲೇ ಆಫ್‌ಗೆ ಎಂಟ್ರಿ

Comments

Leave a Reply

Your email address will not be published. Required fields are marked *