ಕಷ್ಟಕರವಾದ ರಸ್ತೆಗಳು ಸುಂದರ ತಾಣಗಳಿಗೆ ದಾರಿ ಮಾಡಿಕೊಡುತ್ತೆ: ದೀಪಿಕಾ ದಾಸ್

ಬೆಂಗಳೂರು: ಕಷ್ಟಕರವಾದ ರಸ್ತೆಗಳು ಸುಂದರ ತಾಣಗಳಿಗೆ ದಾರಿ ಮಾಡಿಕೊಡುತ್ತೆ ಎಂದು ಬಿಗ್ ಬಾಸ್ ಸೀಸಸ್ 7 ಖ್ಯಾತಿಯ ದೀಪಿಕಾ ದಾಸ್ ಬರೆದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ನಾಗಿಣಿ ಖ್ಯಾತಿಯ ದೀಪಿಕಾ ದಾಸ್ ಇನ್‍ಸ್ಟಾಗ್ರಾಮ್ ನಲ್ಲಿ ತಮ್ಮ ಫೋಟೋವನ್ನು ಹಾಕಿ, ಕಷ್ಟಕರವಾದ ರಸ್ತೆಗಳು ಸುಂದರ ತಾಣಗಳಿಗೆ ದಾರಿ ಮಾಡಿಕೊಡುತ್ತೆ. ಅದಕ್ಕೆ ಯಾವಾಗಲು ನಗು ನಗುತ ಇರಿ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

 

View this post on Instagram

 

A post shared by Deepika Das (@deepika__das)

ಸೋಶಿಯಲ್ ಮಿಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ದೀಪಿಕಾ ತಮ್ಮ ದಿನನಿತ್ಯದ ಅಪ್ಡೇಟ್ ಗಳನ್ನು ನೀಡುತ್ತಿರುತ್ತಾರೆ. ಅಭಿನಯದ ಅಲ್ಲದೇ ಕೊರೊನಾ ಸಮಯದಲ್ಲಿ ಜನರಿಗೆ ಸಹಾಯ ಮಾಡುವ ಮೂಲಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿರುತ್ತಾರೆ. ತಮ್ಮ ಫ್ಯಾಷನ್ ಹಾಗೂ ಫೋಟೋಶೂಟ್ ಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರಸ್ತುತ ದೀಪಿಕಾ ನಟನೆಯ ‘ಕಾಂಜಿ ಪೀಂಜಿ ಲವ್’ ಸಿನಿಮಾದ ರಿಲೀಸ್ ಗೆ ಸಿದ್ಧವಾಗಿದ್ದು, ಈ ವರ್ಷ ಡಿಸೆಂಬರ್ ನಲ್ಲಿ ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಇದನ್ನೂ ಓದಿ: ಭಾರತದಲ್ಲಿ ಆರಂಭ, ಅಮೆರಿಕದಲ್ಲಿ ಕೊನೆ – ಸ್ಪೆಷಲ್ ಆಗಿ ಹುಟ್ಟುಹಬ್ಬ ಆಚರಿಸಿದ ರಮಿಕಾ ಸೇನ್‍

 

View this post on Instagram

 

A post shared by Deepika Das (@deepika__das)

ಬಿಗ್ ಬಾಸ್ ಮನೆಯಲ್ಲಿದ್ದಾಗ ಸ್ಪರ್ಧಿಗಳು ದೀಪಿಕಾ ಅವರನ್ನು ದೀಪ್ಸ್ ಎಂದೇ ಕರೆಯುತ್ತಿದ್ದರು. ಅದು ಅಲ್ಲದೇ ಮಹಿಳಾ ಸ್ಪರ್ಧಿಗಳಲ್ಲಿ ಟಫ್ ಫ್ಯಾಟ್ ಕೊಟ್ಟಿದ್ದ ದೀಪಿಕಾ ಫಿನಾಲೆಯಲ್ಲಿ 4ನೇ ಸ್ಪರ್ಧಿಯಾಗಿ ಹೊರಬಂದರು. ಅದರಲ್ಲಿಯೂ ಮನೋರಂಜನೆಗೆ ಸಂಬಂಧಿಸಿದಂತೆ ಬಿಗ್ ಬಾಸ್ ವೇದಿಕೆ ಮೇಲೆ ಚೆಕ್ ಅನ್ನು ಸ್ವೀಕರಿಸಿದ್ದರು. ಬಿಗ್ ಬಾಸ್ ಮನೆಯಲ್ಲಿ ಇರುವಾಗ ದೀಪಿಕಾ ಮತ್ತು ಶೈನ್ ಶೆಟ್ಟಿಯ ಕಾಂಬಿನೇಷನ್ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು.

Comments

Leave a Reply

Your email address will not be published. Required fields are marked *