ಗೋವಾದಲ್ಲಿ ಬಿಜೆಪಿ ಸರ್ಕಾರ ರಚಿಸದಂತೆ ಎಲ್ಲಾ ಪ್ರಯತ್ನಕ್ಕೂ ಸಿದ್ಧ: ಕಾಂಗ್ರೆಸ್

ಪಣಜಿ: ಗೋವಾದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಸಾಧ್ಯವಿರುವ ಎಲ್ಲಾ ಪರ್ಯಾಯ ಮಾರ್ಗಗಳನ್ನು ಪರಿಗಣಿಸುತ್ತೇವೆ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗಂಬರ್ ಕಾಮತ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ವಿಧಾನಸಭಾ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆದ್ದಿರುವ ಬಿಜೆಪಿಯು ಐವರು ಪಕ್ಷೇತರರ ಬೆಂಬಲವನ್ನು ಪಡೆದುಕೊಂಡಿದೆ. ಆದರೆ ಬಿಜೆಪಿಯೂ ಇನ್ನೂ ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಿಲ್ಲ. ಹಕ್ಕು ಸಾಧಿಸಲು ವಿಫಲವಾಗಿರುವುದನ್ನು ಗಮನಿಸಿದರೆ ಬಿಜೆಪಿಯಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದನ್ನು ಸೂಚಿಸುತ್ತದೆ ಎಂದರು.

ಗೋವಾದಲ್ಲಿ ಕಾಂಗ್ರೆಸ್, ಬಿಜೆಪಿಯೇತರ ಪಕ್ಷನ್ನು ರಚಿಸಲು ಎಲ್ಲಾ ಆಯ್ಕೆಗೂ ಮುಕ್ತವಾಗಿದೆ. ಇದರಿಂದಾಗಿ ವಿಧಾನಸಭಾ ಚುನಾವಣೆಯ ತೀರ್ಪನ್ನು ಎತ್ತಿಹಿಡಿಯುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಇಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ

ಹಲವು ಶಾಸಕರು ಕಾಂಗ್ರೆಸ್‍ಗೆ ಭೇಟಿ ನೀಡಿದ್ದು, ಸರ್ಕಾರ ರಚನೆಗೆ ಮುಂದಾಳತ್ವ ವಹಿಸುವಂತೆ ಒತ್ತಾಯಿಸಿದ್ದಾರೆ. ಎಲ್ಲಾ ಬಿಜೆಪಿಯೇತರ ಶಾಸಕರು ತಮ್ಮ ಬುದ್ಧಿವಂತಿಕೆಯನ್ನು ಬಳಸಿ ಮತ್ತು ಗೋವಾದ ಜನರು ಪೂರ್ಣ ಪ್ರಮಾಣದ ಬಿಜೆಪಿಯೇತರ ಸರ್ಕಾರವನ್ನು ಪಡೆಯಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ಮನವಿ ಮಾಡುತ್ತೇವೆ ಎಂದು ತಿಳಿಸಿದರು.

ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನ ಹಾಗೂ ಕಾಂಗ್ರೆಸ್ 11 ಸ್ಥಾನಗಳನ್ನು ಗೆದ್ದಿತ್ತು. ಮಾರ್ಚ್ 10 ರಂದು ಫಲಿತಾಂಶಗಳನ್ನು ಪ್ರಕಟಿಸಲಾಯಿತು. ಇದನ್ನೂ ಓದಿ: ದೇಹದಾರ್ಢ್ಯ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದಲ್ಲಿ ಕಂಚಿನ ಪದಕ ಪಡೆದ ಲೋಕೇಶ್ ಪಟೇಲ್‍ಗೆ ಸನ್ಮಾನ

Comments

Leave a Reply

Your email address will not be published. Required fields are marked *