ಜನಧ್ವನಿ ಕಾರ್ಯಕ್ರಮ ಮೂಲಕವೇ ಲೋಕಸಭಾ ಚುನಾವಣೆಗೆ ರಣಕಹಳೆ-ದಿನೇಶ್ ಗುಂಡೂರಾವ್

ಬೀದರ್: ಆಗಸ್ಟ್ 13 ರಂದು ನಡೆಯಲಿರುವ “ಜನಧ್ವನಿ” ಕಾರ್ಯಕ್ರಮದ ಮೂಲಕ ಲೋಕಸಭಾ ಚುನಾವಣೆಗೆ ರಣಕಹಳೆಯನ್ನು ಊದುವಂತ ಕೆಲಸ ಬೀದರ್ ಜಿಲ್ಲೆಯಿಂದ ಪ್ರಾರಂಭವಾಗುತ್ತೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಖಾಸಗಿ ಹೋಟೆಲ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದ ಮೂಲಕ ಲೋಕಸಭಾ ಚುನಾವಣೆಗೆ ರಣಕಹಳೆ ಮೊಳಗಲಿದ್ದು ಎಐಸಿಸಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಸಾಕ್ಷಿಯಾಗಲಿದ್ದಾರೆ. ಈ ಕಾರ್ಯಕ್ರಮಕ್ಕೆ 2 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದರು.

ಇದೇ ವೇಳೆ ಪ್ರಧಾನಿ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ವೈ ವಿರುದ್ಧ ವಾಗ್ದಾಳಿ ನಡೆಸಿದರು. ದೇಶದಲ್ಲಿ ಭಯೋತ್ಪಾದನೆ ಇವರ ಕಾಲದಲ್ಲಿ ಜಾಸ್ತಿಯಾಗಿದ್ದು, 4 ವರ್ಷದಲ್ಲಿ ಮೋದಿಯ ಕ್ರಾಂತಿಕಾರಿ ಸಾಧನೆ ಏನು?. ಭ್ರಷ್ಟಾಚಾಲ್ದ ವಿರುದ್ಧ ಲೋಕಪಾಲ್ ಮಸೂದೆ ರಚನೆ ಮಾಡೋಕೆ ಆಗಿಲ್ಲ. 4 ವರ್ಷದಲ್ಲಿ ಒಂದೇ ಒಂದು ಪತ್ರಿಕಾಗೋಷ್ಠಿ ಮಾಡದಂತಹ ಪ್ರಧಾನಿ ಮೋದಿ ಎಂದು ಕಿಡಿಕಾರಿದರು.

ಅಧಿಕಾರವಿಲ್ಲದೆ ಮುಖ್ಯಮಂತ್ರಿ ಆಗಬೇಕು ಎಂದು ಬಹಳ ಆಸೆ ಇಟ್ಟುಕೊಂಡವರು. ಆದ್ರೆ ಇದೀಗ ಅಧಿಕಾರ ಇಲ್ಲ. ಅದಕ್ಕೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಕೂಡಾ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Comments

Leave a Reply

Your email address will not be published. Required fields are marked *