ಶ್ರದ್ಧಾ ಭೀಕರ ಹತ್ಯೆ ತೆರೆಯ ಮೇಲೆ ತರಲು ಪ್ಲ್ಯಾನ್ – ಸಿನಿಮಾ ನಿರ್ಮಾಣ ಘೋಷಿಸಿದ ನಿರ್ದೇಶಕ ಮನೀಶ್ ಸಿಂಗ್

ನವದೆಹಲಿ (NewDelhi): ದೆಹಲಿಯಲ್ಲಿ ನಡೆದಿರುವ ಶ್ರದ್ಧಾ ವಾಕರ್ (Shraddha Walker) ಹತ್ಯೆ ರಾಷ್ಟ್ರ ರಾಜಧಾನಿ ಜನತೆಯನ್ನ ಬೆಚ್ಚಿ ಬೀಳಿಸಿದೆ. ತನಿಖೆ ವೇಳೆ ದಿನಕ್ಕೊಂದು ಸ್ಫೋಟಕ ಮಾಹಿತಿಗಳು ಬೆಳಕಿಗೆ ಬರುತ್ತಿವೆ.

ಅಮೆರಿಕದ `ಡೆಕ್ಸ್ಟರ್‌’ (Dexter) ವೆಬ್‌ಸೀರಿಸ್‌ನಿಂದ ಪ್ರೇರಿತನಾದ ಹಂತಕ ಅಫ್ತಾಬ್ ಅಮೀನ್ ಪೂನಾವಾಲ (Aaftab Ameen Poonawala), ಶ್ರದ್ಧಾ ವಾಕರ್‌ನನ್ನು ಹತ್ಯೆ ಮಾಡಿದ 35 ಪೀಸ್‌ಗಳಾಗಿ ಕತ್ತರಿಸಿ ವಿವಿಧ ಕಾಡುಗಳಲ್ಲಿ ಎಸೆದು ಬಂದಿದ್ದ. ಇದು ವಿಕೃತಿಗೆ ಸಾಕ್ಷಿಯಾಗಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಷ್ಟ್ರವ್ಯಾಪಿಯಾಗಿ ಆಕ್ರೋಶ ವ್ಯಕ್ತವಾಯಿತು. ದೇಶವನ್ನೇ ಬೆಚ್ಚಿ ಬೀಳಿಸಿರುವ ಮುಂಬೈಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಕುರಿತು ಟ್ವೀಟ್ ಮಾಡಿದ್ದ ಸಿನಿ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma), ಶ್ರದ್ಧಾಳನ್ನು ಹತ್ಯೆ ಮಾಡಿರುವ ಆರೋಪಿಗೆ ಅದಕ್ಕಿಂತ ಹೀನಾಯ ಸಾವು ಬರಲಿ ಎಂದು ಬರೆದುಕೊಂಡಿದ್ದರು. ಈ ಬೆನ್ನಲ್ಲೇ ನಿರ್ದೇಶಕರೊಬ್ಬರು ಈ ಘಟನೆ ಕುರಿತು ಸಿನಿಮಾವನ್ನೇ ನಿರ್ಮಿಸೋದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: ಶ್ರದ್ಧಾ ಕೇಸ್‌ನಂತೆಯೇ ಬಾಂಗ್ಲಾದಲ್ಲೂ ಭೀಕರ ಹತ್ಯೆ – ಹಿಂದೂ ಯುವತಿಯನ್ನು ಪೀಸ್ ಪೀಸ್ ಮಾಡಿದ ಹಂತಕ ಪ್ರೇಮಿ

ಹೌದು.. ನಿರ್ದೇಶಕ ಹಾಗೂ ನಿರ್ಮಾಪಕ ಮನೀಶ್ ಸಿಂಗ್ (Manish Singh) ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಕುರಿತು ಚಲನಚಿತ್ರ ತಯಾರಿಸುವುದಾಗಿ ಹೇಳಿದ್ದಾರೆ. ಅವರೇ ಹೇಳಿರುವಂತೆ ಈಗಾಗಲೇ ಚಿತ್ರಕಥೆ ಕೆಲಸವನ್ನೂ ಪ್ರಾರಂಭಿಸಿದ್ದಾರೆ ಎನ್ನಲಾಗಿದೆ. ಚಿತ್ರದ ಕಥೆಯ ಬಗ್ಗೆ ಮಾತನಾಡಿರುವ ಮನೀಶ್ ಅವರು, ಈ ಚಿತ್ರವು ಸಂಪೂರ್ಣವಾಗಿ ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನು ಆಧರಿಸಿದೆ. ಅದರ ಜೊತೆಗೆ ಚಿತ್ರದಲ್ಲಿ `ಲವ್ ಜಿಹಾದ್’ (Love Jihad) ಕುರಿತು ಹೇಳಲಾಗುವುದು. ಮದುವೆಯಾಗೋದಾಗಿ ನಟಿಸಿ ಹೆಣ್ಣುಮಕ್ಕಳ ಬದುಕನ್ನು ಸಂಕಷ್ಟಕ್ಕೆ ದೂಡುತ್ತಿರುವ ಜಿಹಾದಿಗಳ ಕುರಿತು ಈ ಚಿತ್ರ ಬಯಲು ಮಾಡಲಿದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಶ್ರದ್ಧಾ ಕೊಲೆ ಪ್ರಕರಣ – ತಲೆ ಬುರುಡೆ ಸುಟ್ಟು, ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದ ಅಫ್ತಾಬ್

ಟೈಟಲ್ ಕೂಡಾ ಫಿಕ್ಸ್: ವೃಂದಾವನ ಫಿಲಂಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ. `ಹು ಕಿಲ್ಡ್ ಶ್ರದ್ಧಾ ವಾಕರ್?’ (WHO KILLED SHRADDHA WALKER) ಎಂದು ಚಿತ್ರಕ್ಕೆ ಹೆಸರಿಡಲಾಗಿದೆ. ಈ ಚಿತ್ರದ ಕೆಲಸಗಳು ವೇಗವಾಗಿ ನಡೆಯುತ್ತಿದ್ದು, ನಿರ್ಮಾಪಕರು ದೆಹಲಿಯ ಸುತ್ತಮುತ್ತಲಿನ ಕಾಡುಗಳ ವಿಡಿಯೋ ಕ್ಲಿಪ್‌ಗಳ ಮೇಲೆ ಸಂಶೋಧನೆ ಮಾಡಲು ತಂಡವನ್ನು ರಚಿಸಿದ್ದಾರೆ. ಇದರೊಂದಿಗೆ ಶೂಟಿಂಗ್‌ಗಾಗಿ ಲೊಕೇಶನ್ ಹುಡುಕಾಟವೂ ನಡೆಯುತ್ತಿದೆ ಎಂದು ಹೇಳಲಾಗಿದೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *