ಜಿಎಸ್‌ಟಿ ಪರಿಹಾರದ ಅವಧಿ ವಿಸ್ತರಣೆ: ಆಗಸ್ಟ್ ತಿಂಗಳಲ್ಲಿ ಅಂತಿಮ ನಿರ್ಣಯ – ಬೊಮ್ಮಾಯಿ

ಬೆಂಗಳೂರು: ಜಿಎಸ್‌ಟಿ ಮಂಡಳಿ ಸಭೆಯಲ್ಲಿ ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರವನ್ನು ವಿಸ್ತರಿಸುವ ಬಗ್ಗೆ ಚರ್ಚೆಯಾಗಿದೆ. ಆಗಸ್ಟ್ ತಿಂಗಳಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಎಸ್‌ಟಿ ಕಾನೂನು ಸಮಿತಿಯು ಕಾನೂನು ತೊಡಕುಗಳನ್ನು ನಿವಾರಣೆ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ. ಫಿಟ್ ಮೆಂಟ್ ಸಮಿತಿಯ ಶಿಫಾರಸುಗಳನ್ನು ಅಂಗೀಕರಿಸಲಾಗಿದೆ ಎಂದರು. ಇದನ್ನೂ ಓದಿ: 130 ಸ್ಥಾನ ಗೆದ್ದು ಕಾಂಗ್ರೆಸ್ ಸರ್ಕಾರ ರಚಿಸೋದು ಗ್ಯಾರಂಟಿ: ಸಿದ್ದರಾಮಯ್ಯ ವಿಶ್ವಾಸ

ಉದಯಪುರದಲ್ಲಿ ಟೈಲರ್‌ ಹತ್ಯೆ ಕುರಿತು ಮಾತನಾಡಿ, ಉದಯಪುರದಲ್ಲಿ ಆಗಿರುವುದು ಅಮಾನವೀಯ ಹಾಗೂ ಅತ್ಯಂತ ಹೇಯ ಕೃತ್ಯ. ಇದರ ಹಿಂದೆ ವ್ಯಕ್ತಿಗಳಷ್ಟೇ ಅಲ್ಲ ಭಯೋತ್ಪಾದಕ ಸಂಸ್ಥೆಗಳಿವೆ ಎಂದು ಹೇಳಿದರು.

ಇದು ಭಯೋತ್ಪಾದನೆಯ ಒಂದು ಕ್ರಮವಾಗಿದೆ. ಅದರ ಹಿಂದೆ ದೊಡ್ಡ ಅಂತರರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರವಿದೆ. ಅದು ಪತ್ತೆಯಾಗಿ, ಅಪರಾಧಿಗಳನ್ನು ಗಲ್ಲಿಗೇರಿಸಬೇಕು. ರಾಜಸ್ಥಾನ ಸರ್ಕಾರ ಸಂಪೂರ್ಣ ತನಿಖೆ ಕೈಗೊಂಡು ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣ – ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ NIA ಅಧಿಕಾರಿಗಳ ದಾಳಿ

ಪ್ರಧಾನ ಮಂತ್ರಿಗಳ ನಿರ್ದೇಶನದ ಮೇರೆಗೆ ತನಿಖೆ
ಕೇಂದ್ರ ಗೃಹ ಸಚಿವಾಲಯದಿಂದ ರಾಜ್ಯ ಗುತ್ತಿಗೆದಾರರ ಸಂಘಕ್ಕೆ ದಾಖಲೆಗಳನ್ನು ಒದಗಿಸಲು ಸೂಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಹಿತಿ ಕೊಡಲಿ ತೊಂದರೆ ಇಲ್ಲ. ಪ್ರಧಾನ ಮಂತ್ರಿಗಳ ನಿರ್ದೇಶನದ ಮೇರೆಗೆ ತನಿಖೆ ಮಾಡಲಾಗುವುದು ಎಂದು ತಿಳಿಸಿದರು.

ಬಿ.ಟಿ.ಲಲಿತಾ ನಾಯಕ್ ಅವರು ಪಿಎಸ್‌ಐ ನೇಮಕಾತಿಗೆ ಪರೀಕ್ಷೆ ನಡೆಸಬಾರದು ಎಂದು ಆಗ್ರಹಿಸುತ್ತಿರುವ ಬಗ್ಗೆ ಮಾಡಿ, ಮೊದಲು ತನಿಖೆಯಾಗಲಿ ಎಂದು ಸ್ಪಷ್ಟವಾಗಿ ಹೇಳಿದ್ದೇನೆ ಎಂದರು.

Live Tv

Comments

Leave a Reply

Your email address will not be published. Required fields are marked *