ಅಡ್ಡವಾಗಿ ಕಾಲುಗಳು, ಮೂಲೆಯಲ್ಲಿ ತಲೆ – ಸೂಟ್‌ಕೇಸ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆ

ಲಕ್ನೋ: ಉತ್ತರಪ್ರದೇಶದ (Uttar Pradesh) ಘಾಜಿಯಾಬಾದ್‌ನ (ghaziabad) ಸೂಟ್‌ಕೇಸ್‌ವೊಂದರಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಮಹಿಳೆಯ ವಯಸ್ಸು ಸುಮಾರು 25-28 ಎಂದು ಅಂದಾಜಿಸಲಾಗಿದ್ದು, ಸಿಂಧೂರ ಹಾಗೂ ಕಾಲು ಉಂಗುರ ಧರಿಸಿರುವುದು ಕಂಡುಬಂದಿದೆ ಎಂದಿದ್ದಾರೆ.ಇದನ್ನೂ ಓದಿ: ಆನೇಕಲ್‌ | ಆಟವಾಡ್ತಿದ್ದಾಗ ಕರೆಂಟ್ ಶಾಕ್‌ ತಗುಲಿ 11 ವರ್ಷದ ಬಾಲಕಿ ಸಾವು

ಘಾಜಿಯಾಬಾದ್‌ನ ಲೋನಿ ಗಡಿ ಪ್ರದೇಶದ ಕಾಲುವೆಯಲ್ಲಿ ಮಹಿಳೆಯ ಛಿದ್ರಗೊಂಡ ಮೃತದೇಹ ಸೂಟ್‌ಕೇಸ್‌ವೊಂದರಲ್ಲಿ ಪತ್ತೆಯಾಗಿದೆ. ಈ ಕುರಿತು ಮಂಗಳವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಸೂಟ್‌ಕೇಸ್‌ನಲ್ಲಿ ಕಾಲುಗಳನ್ನು ಅಡ್ಡಲಾಗಿ ಇರಿಸಲಾಗಿದ್ದು, ಕೈ ಹಾಗೂ ತಲೆಯನ್ನು ಮೂಲೆಯಲ್ಲಿ ಇರಿಲಾಗಿತ್ತು. ಸದ್ಯ ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ಮಹಿಳೆಯ ಗುರುತು ಪತ್ತೆ ಹಚ್ಚುವಲ್ಲಿ ನಿರತರಾಗಿದ್ದಾರೆ.

ಇದಕ್ಕೂ ಮುನ್ನ ದೆಹಲಿಯ (Dehli) ನೆಹರೂ ವಿಹಾರ್‌ದಲ್ಲಿ 9 ವರ್ಷದ ಬಾಲಕಿಯ ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿತ್ತು. ಪ್ರಾಥಮಿಕ ಮಾಹಿತಿ ಪ್ರಕಾರ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇನ್ನೂ ಬಾಲಕಿ ಆ ದಿನ ತನ್ನ ಸಂಬಂಧಿಕರನ್ನು ಭೇಟಿಯಾಗಲು ಹೋಗಿದ್ದಳು. ಆದರೆ ಅವಳು ಎರಡು ಗಂಟೆ ಕಳೆದರೂ ಮನೆಗೆ ಹಿಂದಿರುಗಲಿಲ್ಲ. ಹೀಗಾಗಿ ನಾವು ಆಕೆಯನ್ನು ಹುಡುಕಲು ಪ್ರಾರಂಭಿಸಿದೆವು ಎಂದು ಕುಟುಂಬ ಮೂಲಗಳು ತಿಳಿಸಿವೆ.ಇದನ್ನೂ ಓದಿ: ಲವ್ವರ್‌ ಜೊತೆಯೇ ಓಡಿ ಹೋಗಬಹುದಿತ್ತು, ನನ್ನ ಅಣ್ಣನನ್ನು ಯಾಕೆ ಕೊಂದ್ಲು?- ಹತ್ಯೆಯಾದ ರಘುವಂಶಿ ಸಹೋದರಿ ಕಣ್ಣೀರು