ಡಿ.ಕೆ.ಶಿವಕುಮಾರ್‌ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್‌- ಇಂದು ಸುಪ್ರೀಂನಲ್ಲಿ ವಿಚಾರಣೆ

ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಅರ್ಜಿ ವಿಚಾರಣೆಯು ಇಂದು (ಮಂಗಳವಾರ) ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆಯುವ ನ್ಯಾ. ನೂರ್ಯಕಾಂತ್‌ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

ಸದ್ಯ ಸಿಬಿಐ ಇನ್ನೂ ಮೇಲ್ಮನವಿ ಅರ್ಜಿ ಸಲ್ಲಿಸಿಲ್ಲ. ಯತ್ನಾಳ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇದೆ. ಸರ್ಕಾರದಿಂದ ಸಿಬಿಐ ತನಿಖೆ ವಾಪಸ್ ಪಡೆದಿತ್ತು. ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿತ್ತು. ಹೈಕೋರ್ಟ್, ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸೂಚಿಸಿತ್ತು.