ಬೆಂಗಳೂರಿನಲ್ಲಿ 2 ದಿನ ವಿದ್ಯುತ್ ವ್ಯತ್ಯಯ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಮತ್ತು ನಾಳೆ(ಭಾನುವಾರ) ವಿದ್ಯುತ್ ವ್ಯತ್ಯಯವಾಗಲಿದೆ.

220 ಕೆವಿ ಎನ್‍ಆರ್‍ಎಸ್ ವಿದ್ಯುತ್ ಕೇಂದ್ರದಲ್ಲಿ ತುರ್ತು ನಿರ್ವಹಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವೆಡೆ ಶನಿವಾರ ಮತ್ತು ಭಾನುವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ತಿಳಿಸಿದೆ.

ವಿಜಯನಗರ, ನಾಗರಬಾವಿ, ಕಾಮಾಕ್ಷಿಪಾಳ್ಯ, ಕೊಡಿಗೇಹಳ್ಳಿ, ಉಲ್ಲಾಳ, ಜ್ಞಾನಭಾರತಿ, ನಾಗರಬಾವಿ, ಚಂದ್ರಾ ಲೇಔಟ್, ಮೂಡಲಪಾಳ್ಯ, ಹಂಪಿನಗರ, ಮಲ್ಲತಹಳ್ಳಿ, ಅತ್ತಿಗುಪ್ಪೆ, ಕೆಂಗೇರಿ ಸ್ಯಾಟಲೈಟ್ ಟೌನ್, ಚಾಮರಾಜಪೇಟೆ, ಮೈಸೂರು ರಸ್ತೆಯ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಇಂದು ಬೆಳಗ್ಗೆ 8 ರಿಂದ ಭಾನುವಾರ ರಾತ್ರಿ 8 ಗಂಟೆವರೆಗೆ ವಿದ್ಯುತ್ ಸ್ಥಗಿತಗೊಳ್ಳಲಿದೆ.

Comments

Leave a Reply

Your email address will not be published. Required fields are marked *