‘ಆದಿಪುರುಷ’ನಿಗೆ ಸಂಕಷ್ಟ: ಚಿತ್ರ ನಿಲ್ಲಿಸುವಂತೆ ದೆಹಲಿ ಹೈಕೋರ್ಟಿಗೆ ಅರ್ಜಿ

ನಿನ್ನೆಯಷ್ಟೇ ಜಗತ್ತಿನಾದ್ಯಂತ ಬಿಡುಗಡೆಯಾಗಿರುವ ಆದಿಪುರುಷ ಸಿನಿಮಾ ಪ್ರದರ್ಶನವನ್ನು ನಿಲ್ಲಿಸುವಂತೆ ದೆಹಲಿ (Delhi) ಹೈಕೋರ್ಟಿಗೆ (High Court) ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿವೆ ಹಿಂದೂಪರ ಸಂಘಟನೆಗಳು. ಈ ಸಿನಿಮಾದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆಯಾಗುವಂತಹ ಸಾಕಷ್ಟು ಅಂಶಗಳು ಇವೆ. ಹಾಗಾಗಿ ಸಿನಿಮಾ ಪ್ರದರ್ಶನವನ್ನು ನಿಲ್ಲಿಸುವಂತೆ ಸಂಘಟನೆಗಳು ಮನವಿ ಮಾಡಿಕೊಂಡಿವೆ.

ರಾಮಾಯಣವನ್ನು ತಮಗೆ ಬೇಕಾದಂತೆ ಬದಲಾಯಿಸಿಕೊಂಡಿದ್ದಾರೆ. ಅದು ಹಿಂದೂಗಳಿಗೆ ಮತ್ತು ಹಿಂದೂ (Hindu) ದೇವರುಗಳಿಗೆ ಮಾಡಿರುವ ಅಪಮಾನ. ಈ ಹಿಂದೆಯೇ ಅನೇಕ ಅಂಶಗಳನ್ನು ಚಿತ್ರತಂಡದ ಗಮನಕ್ಕೆ ತರಲಾಗಿತ್ತು. ಎಲ್ಲವನ್ನೂ ಬದಲಾವಣೆ ಮಾಡುವುದಾಗಿ ಚಿತ್ರತಂಡ ತಿಳಿಸಿತ್ತು. ಆದರೆ, ಯಾವುದೇ ಬದಲಾವಣೆಯನ್ನು ಮಾಡದೇ ಹಳೆ ಸಿನಿಮಾವನ್ನೇ ಬಿಡುಗಡೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ನೇಪಾಳದಲ್ಲಿ ಸಿನಿಮಾ ಬ್ಯಾನ್ ?

ಪ್ರಭಾಸ್ (Prabhas) ನಟನೆಯ ಆದಿಪುರುಷ (Adipurusha) ಸಿನಿಮಾ ಎಲ್ಲ ಕಡೆ ತುಂಬಿದ ಪ್ರದರ್ಶನ ಕಾಣುತ್ತಿದ್ದರೆ ನೇಪಾಳದಲ್ಲಿ ಅದು ಬಿಡುಗಡೆಯಾಗಿಲ್ಲ. ಚಿತ್ರದ ಒಂದು ಡೈಲಾಗ್ ಬಗ್ಗೆ ಕಠ್ಮಂಡು (Kathmandu)  ಮೇಯರ್ ಗರಂ ಆಗಿದ್ದು, ವಿವಾದಿತ  ಆ ಡೈಲಾಗ್ ತಗೆಯದಿದ್ದರೆ ಸಿನಿಮಾವನ್ನು ಬ್ಯಾನ್ ಮಾಡುವುದಾಗಿ ಅವರು ಹೇಳಿದ್ದಾರೆ. ಅಲ್ಲದೇ, ಮೂರು ದಿನ ಗಡುವು ಕೂಡ ನೀಡಿದ್ದಾರೆ.

ಆದಿಪುರುಷ ಸಿನಿಮಾ ಮೊದಲಿನಿಂದಲೂ ವಿವಾದಕ್ಕೀಡು ಆಗುತ್ತಲೇ ಇದೆ. ಸಿನಿಮಾದ ಗ್ರಾಫಿಕ್ಸ್, ರಾವಣನ ಪಾತ್ರ, ತಿರುಪತಿಯಲ್ಲಿ ನಟಿಗೆ ಮುತ್ತಿಟ್ಟ ನಿರ್ದೇಶಕ ಹೀಗೆ ನಾನಾ ಕಾರಣಗಳಿಂದ ಸಿನಿಮಾ ಸುದ್ದಿಯಾಗುತ್ತಿದೆ. ಈ ಬಾರಿ ಡೈಲಾಗ್ ವೊಂದು ಹಲವು ಜನರ ಭಾವನೆಗೆ ಸಂಚಕಾರ ತಂದಿದೆಯಂತೆ. ಇದನ್ನೂ ಓದಿ:ಯಶ್ ಸಿನಿಮಾಗಾಗಿ ಬೆಂಗಳೂರಿನಲ್ಲಿ ಬೀಡು ಬಿಟ್ಟ ಡೈರೆಕ್ಟರ್- ಇಲ್ಲಿದೆ ಗುಡ್ ನ್ಯೂಸ್

ಈ ಸಿನಿಮಾದಲ್ಲಿ ‘ಸೀತಾ ಭಾರತದ ಮಗಳು..’ ಎಂದು ಡೈಲಾಗ್ ಹೇಳಿಸಲಾಗಿದೆ. ಈ ಮಾತಿಗೆ ಕಠ್ಮುಂಡು ಮೇಯರ್ (Mayor) ಆಕ್ಷೇಪನೆಯನ್ನು ಎತ್ತಿದ್ದಾರೆ. ರಾಮಾಯಣದ ಪ್ರಕಾರ ಸೀತೆಯು ನೇಪಾಳದ ಜಾನಕ್ ಪುರದಲ್ಲಿ ಜನಿಸಿದ್ದಾರೆ. ಇಲ್ಲಿಗೆ ಶ್ರೀರಾಮ ಬಂದು ಸೀತೆಯನ್ನು ಮದುವೆ ಆಗಿರುವ ಉಲ್ಲೇಖ ಕೂಡ ಇದೆ. ಆದರೆ, ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಮತ್ತು ಸುಳ್ಳು ಹೇಳಲಾಗಿದೆ ಎಂದು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

 

ಈಗಾಗಲೇ ನೇಪಾಳದಲ್ಲಿ ಈ ಸಿನಿಮಾದ ಸೆನ್ಸಾರ್ ಅನ್ನು ತಡೆಹಿಡಿಯಲಾಗಿದೆ. ಆದರೆ, ಉಳಿದ ಕಡೆ ಸಿನಿಮಾ ಪ್ರದರ್ಶನವಾಗುತ್ತಿದೆ. ಎಲ್ಲೆಲ್ಲಿ ಈ ಸಿನಿಮಾ ಪ್ರದರ್ಶನವಾಗುತ್ತಿದೆಯೋ ಅಲ್ಲಲ್ಲಿ, ಈ ಡೈಲಾಗ್ ತಗೆಯಲೇಬೇಕು ಎಂದು ಮೇಯರ್ ಒತ್ತಾಯಿಸಿದ್ದಾರೆ. ಸಿನಿಮಾವನ್ನು ನೇಪಾಳದಲ್ಲಿ ಬ್ಯಾನ್ ಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.