‘ಉಜ್ವಲಾ ಯೋಜನೆ’ಯಡಿ 35 ಫಲಾನುಭವಿಗಳಿಗೆ ಸಿಲಿಂಡರ್ ವಿತರಣೆ

ಚಿಕ್ಕೋಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಕಾಂಕ್ಷೆ ‘ಉಜ್ವಲಾ ಯೋಜನೆ’ಯಡಿ 35 ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್‍ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮತಕ್ಷೇತ್ರದ ಭೋಜ ಗ್ರಾಮದಲ್ಲಿ ಜರುಗಿತು.

ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರ ಅನುಪಸ್ಥಿತಿಯಲ್ಲಿ ಊರಿನ ಹಿರಿಯರಿಗೆ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಮುಖಂಡರು ಗ್ಯಾಸ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಿಂದ ಸಾಕಷ್ಟು ಅನುಕೂಲವಾಗಲಿದೆ ಎಂದು ಫಲಾನುಭವಿಗಳು ಸಂತಸ ವ್ತಕ್ತಪಡಿಸಿದರು. ಇದನ್ನೂ ಓದಿ: ‘ನನ್ನ ಹೆಸರು ಸಲ್ಮಾನ್ ಖಾನ್’ ಎಂದು ಹಾಲಿವುಡ್ ನಟನಿಗೆ ಪರಿಚಯ ಮಾಡಿಕೊಂಡ ಸಲ್ಲು

ಬಿಜೆಪಿ ಮುಖಂಡ ಸಾತಗೌಡ ಪಾಟೀಲ್ ಈ ಕುರಿತು ಮಾತನಾಡಿ, ಕೇಂದ್ರ ಸರ್ಕಾರ ಇಂತಹ ಹತ್ತು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಜನಸಾಮಾನ್ಯರು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಸೇರಿದಂತೆ ಊರಿನ ಮುಖಂಡರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *