ಅಮುಲ್‍ಗೆ ವಿರೋಧ – ನಂದಿನಿ ಉತ್ಪನ್ನ ಖರೀದಿಸಿ ಹಂಚಿದ ಡಿಕೆಶಿ

ಹಾಸನ: ನಂದಿನಿ ಉತ್ಪನ್ನಗಳನ್ನು (Nandini milk products) ಖರೀದಿಸಿ ಹಂಚುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar) ರಾಜ್ಯದಲ್ಲಿ ಲಗ್ಗೆ ಇಡುತ್ತಿರುವ ಅಮುಲ್ (Amul) ಉತ್ಪನ್ನಗಳಿಗೆ ವಿಭಿನ್ನವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

ಹಾಸನದ (Hassan) ಹೇಮಾವತಿ ಪ್ರತಿಮೆ ಬಳಿಯ ನಂದಿನಿ ಹಾಲಿನ ಕೇಂದ್ರದಲ್ಲಿ ಸುಮಾರು ಎರಡೂವರೆ ಸಾವಿರ ರೂ. ಮೌಲ್ಯದ ಉತ್ಪನ್ನಗಳನ್ನು ಖರೀದಿಸಿದ್ದಾರೆ. ಹಾಲು, ತುಪ್ಪ, ಮಜ್ಜಿಗೆ, ಮೈಸೂರ್ ಪಾಕ್ ಸೇರಿ ಹತ್ತಾರು ಉತ್ಪನ್ನ ಖರೀದಿ ಮಾಡಿ ಬೆಂಬಲಿಗರು ಹಾಗೂ ಕಾರ್ಯಕರ್ತರಿಗೆ ಹಂಚಿದ್ದಾರೆ. ನಂದಿನಿ ಕೇಂದ್ರದಲ್ಲೇ ಫ್ಲೇವರ್ಡ್ ಮಿಲ್ಕ್ ಕುಡಿದಿದ್ದಾರೆ. ಇದನ್ನೂ ಓದಿ: 20ಕ್ಕೂ ಹೆಚ್ಚು ಬಿಜೆಪಿ ಶಾಸಕರಿಗೆ ಕೊಕ್‌ – ಲಿಸ್ಟ್‌ನಲ್ಲಿ ಯಾರಿದ್ದಾರೆ?

ರಾಜ್ಯದಲ್ಲಿ ಅಮುಲ್ ಉತ್ಪನ್ನ ಮಾರಾಟಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ವಿಭಿನ್ನ ಹಾದಿಯಲ್ಲಿ ವಿರೋಧ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ: ರಾಹುಲ್‌ ವಿರುದ್ಧ ಮಾನಹಾನಿ ಕೇಸ್‌ ದಾಖಲಿಸುತ್ತೇನೆ: ಅಸ್ಸಾಂ ಸಿಎಂ