ಶಾಂತಿಯುತ ಪ್ರತಿಭಟನೆ ಡಿಕೆಶಿ ಮನವಿ

ನವದೆಹಲಿ: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಂಧನ ವಿರೋಧಿಸಿ ಬುಧವಾರ ನಡೆಯಲಿರುವ ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸುವಂತೆ ಪ್ರತಿಭಟನೆಗೆ ಕರೆ ನೀಡಿರುವ ನಾಯಕರಲ್ಲಿ ಡಿಕೆಶಿ ಮನವಿ ಮಾಡಿದ್ದಾರೆ.

ಡಿಕೆಶಿ ಬಂಧನ ವಿರೋಧಿಸಿ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದ್ದು, ಈ ಪ್ರತಿಭಟನೆಯಲ್ಲಿ ಸುಮಾರು 50 ಸಾವಿರ ಮಂದಿ ಭಾಗಿಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಮೂಲಕ ಮನವಿ ಮಾಡಿರುವ ಡಿಕೆ ಶಿವಕುಮಾರ್ ಅವರು, ಸಾರ್ವಜಿಕ ಆಸ್ತಿಗೆ ಹಾನಿ ಮಾಡಬೇಡಿ. ಶಾಂತಿ ಭಂಗ ತರಬೇಡಿ ಎಂದು ಮನವಿ ಮಾಡಿದ್ದಾರೆ.

ಪ್ರತಿಭಟನೆಗೆ ಕರೆ ನೀಡಿರುವ ಎಲ್ಲಾ ನಾಯಕರಿಗೂ, ಬೆಂಬಲಿಗರಿಗೂ ಧನ್ಯವಾದ. ಪ್ರತಿಭಟನೆ ಶಾಂತಿಯಿಂದ ಇರಲಿ. ಜನತೆಗೆ ನಷ್ಟ ಉಂಟು ಮಾಡುವ ರೀತಿಯಲ್ಲಿ ನಡೆದುಕೊಳ್ಳಬೇಡಿ. ಸಾರ್ವಜನಿಕ ಆಸ್ತಿಗೆ ಹಾನಿ ಮಾಡಬೇಡಿ ಎಂದು ತಿಳಿಸಿದ್ದಾರೆ.

ಇತ್ತ ನವದೆಹಲಿಯಲ್ಲಿ ಮಾತನಾಡಿದ ಸಂಸದ ಡಿ.ಕೆ ಸುರೇಶ್ ಅವರು ಕೂಡ ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಮನವಿ ಮಾಡಿದ್ದು, ನಾವು ನಿಮ್ಮ ನಂಬಿಕೆಗಳನ್ನು ಉಳಿಸಿಕೊಳ್ಳಲಿದ್ದೇವೆ. ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಭೇಟಿ ಮಾಡಿದ್ದೆ. ನಿಮ್ಮ ಜೊತೆ ನಾವಿದ್ದೇವೆ ಎಂಬ ಭರವಸೆ ನೀಡಿದ್ದಾರೆ. ಕಾನೂನು ಹೋರಾಟದ ಹಾಗೂ ಡಿಕೆಶಿ ಅವರ ಆರೋಗ್ಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ನಿಮ್ಮ ಅಭಿಮಾನ, ಪ್ರೀತಿಗೆ ಚಿರ ಋಣಿಯಾಗಿರುತ್ತೇವೆ ಎಂದರು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *