ಕಡೆಯ ಆಷಾಢ ಶುಕ್ರವಾರ ಚಾಮುಂಡೇಶ್ವರಿ ದರ್ಶನ ಪಡೆದ ಡಿಕೆಶಿ

ಮೈಸೂರು: ಕಡೆಯ ಅಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಜಲಸಂಪ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಇಂದು ಜಿಲ್ಲೆಯ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇವಿಯ ಅಶೀರ್ವಾದದಿಂದ ಎಲ್ಲಾ ಕಡೆ ಉತ್ತಮವಾಗಿ ಮಳೆ ಬೆಳೆ ಆಗಿದೆ. ಪ್ರವಾಹ ಉಂಟಾಗುವಂತಹ ಸ್ಥಳಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ನಾನು ಇಲ್ಲಿ ರಾಜಕೀಯ ಮಾತನಾಡಲು ಬಂದಿಲ್ಲ.  ದೇವಾಲಯದಲ್ಲಿ ದೇವಿ ಮತ್ತು ಭಕ್ತರ ನಡುವಿನ ಸಂಬಂಧ ಎಂದರು.

ಕೇರಳದಲ್ಲಿ ನಡೆದಿರುವ ಅನಾಹುತದಿಂದ ಎಚ್ಚರಿಕೆ ವಹಿಸಿ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಿ ಜಿಲ್ಲಾ ಆಡಳಿತ ವತಿಯಿಂದ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ. ಎಷ್ಟು ಸಾಧ್ಯವೋ ಅಷ್ಟು ನೀರನ್ನು ಸಂಗ್ರಹ ಮಾಡಲಾಗುತ್ತಿದೆ. ಅದ್ದರಿಂದ ಹೆಚ್ಚುವರಿ ನೀರನ್ನು ಅನಿವಾರ್ಯವಾಗಿ ಬಿಡುಗಡೆ ಮಾಡಲಾಗುತ್ತಿದೆ ಎಂದರು.

ಇದೇ ವೇಳೆ ಸಾಲಮನ್ನಾ ಸ್ಪಷ್ಟನೆ ಕುರಿತ ಮಾಧ್ಯಮಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಅವರು, ಸಾಲಮನ್ನಾ ವಿಚಾರದಲ್ಲೂ ಎಲ್ಲವೂ ಸೂಸುತ್ರವಾಗಿ ನಡೆಯುತ್ತದೆ. ಎಲ್ಲವನ್ನೂ ತಾಯಿ ಚಾಮುಂಡಿದೇವಿ ನೋಡಿಕೊಳ್ಳುತ್ತಾಳೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಬಗ್ಗೆಯೂ ಪ್ರತಿಕ್ರಿಯೆ ನೀಡಲ್ಲ ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

Comments

Leave a Reply

Your email address will not be published. Required fields are marked *