ನ್ಯಾಯಾಂಗಕ್ಕೆ ಉಪದೇಶ ಮಾಡಲು ಬರಬೇಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

ನವದೆಹಲಿ: ತನಗೆ ವಿಧಿಸಿರುವ ಜೈಲು ಶಿಕ್ಷೆ ವಿರುದ್ಧ ಪಾತಕಿ ಅಬು ಸಲೇಂ ಸಲ್ಲಿಸಿದ್ದ ಅರ್ಜಿ ವಿಚಾರವಾಗಿ ಕೇಂದ್ರ ಗೃಹ ಸಚಿವಾಲಯ ತಳೆದಿರುವ ನಿಲುವಿಗೆ ಸುಪ್ರೀಂ ಕೋರ್ಟ್‌ ತೀಕ್ಷ್ಣ ಪದಗಳಿಂದ ತಿರುಗೇಟು ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ನಿರ್ಧಾರ ಕೈಗೊಳ್ಳಬಹುದು ಎಂದು ಹೇಳಿರುವ ಕೇಂದ್ರದ ವಿರುದ್ಧ ಸುಪ್ರೀಂ ಹರಿಹಾಯ್ದಿದೆ. ಇದನ್ನೂ ಓದಿ: ಬುಲ್ಡೋಜರ್‌ ಕಾರ್ಯಾಚರಣೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ: ಸುಪ್ರೀಂ ಕೋರ್ಟ್

ನ್ಯಾಯಾಂಗಕ್ಕೆ ಉಪನ್ಯಾಸ ನೀಡಬೇಡಿ. ನೀವು ನಿರ್ಧರಿಸಬೇಕಾದ ಯಾವುದೇ ಪ್ರಕರಣದ ಬಗ್ಗೆ ನಿರ್ಧಾರ ಕೈಗೊಳ್ಳಲು ನಮಗೆ ಹೇಳಿದಾಗ ನಾವು ಅದನ್ನು ದಯೆಯಿಂದ ತೆಗೆದುಕೊಳ್ಳಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಎಸ್‌.ಕೆ.ಕೌಲ್‌ ಅವರು ಕೇಂದ್ರ ಗೃಹ ಸಚಿವಾಲಯವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳಲು ನಮಗೆ ಹೇಳಲು ಗೃಹ ಸಚಿವಾಲಯದ ಕಾರ್ಯದರ್ಶಿ ಯಾರು ಎಂದು ನ್ಯಾಯಮೂರ್ತಿ ಖಾರವಾಗಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: 30 ಲಕ್ಷದ ಚಿನ್ನವನ್ನು ಗುದನಾಳ, ವಿಗ್‌ನಲ್ಲಿ ಬಚ್ಚಿಟ್ಟುಕೊಂಡಿದ್ದ ಕಿಲಾಡಿ ಕಳ್ಳನ ಬಂಧನ

ಗೃಹ ಸಚಿವಾಲಯದ ಅಫಿಡವಿಟ್‌ನಲ್ಲಿರುವ ‘ಸೂಕ್ತ ಸಮಯದಲ್ಲಿ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂಬ ಮಾತನ್ನು ನಾವು ಒಪ್ಪುವುದಿಲ್ಲ ಎಂದು ತಿಳಿಸಿದ್ದಾರೆ. ಗೃಹ ಸಚಿವಾಲಯವು ತನ್ನ ಅಫಿಡವಿಟ್‌ನಲ್ಲಿ, ಸರ್ಕಾರವು ನಿರ್ಧಾರ ತೆಗೆದುಕೊಳ್ಳಲು ಇದು ಸೂಕ್ತ ಸಮಯವಲ್ಲ. ಸುಪ್ರೀಂ ಕೋರ್ಟ್ ನಿರ್ಧರಿಸಬಹುದು ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂ.ಎಂ.ಸುಂದ್ರೇಶ್ ಅವರು 1993ರ ಬಾಂಬೆ ಸ್ಫೋಟ ಪ್ರಕರಣದಲ್ಲಿ ಅಪರಾಧಿಯಾಗಿರುವ ಅಬು ಸಲೇಂ ಅರ್ಜಿ ವಿಚಾರಣೆ ನಡೆಸಿದರು.

Comments

Leave a Reply

Your email address will not be published. Required fields are marked *