ಬೆಳಗಾವಿ: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ದೋಸ್ತಿ ಸರ್ಕಾರ 24 ಗಂಟೆಗಳಲ್ಲೇ ಪತನವಾಗಲಿದ್ದು, ನಂತರ ಒಂದು ವಾರದಲ್ಲಿ ಬಿಜೆಪಿ ಹೊಸ ಸರ್ಕಾರವನ್ನು ರಚಿಸುತ್ತದೆ ಎಂದು ಬಿಜೆಪಿ ಶಾಸಕ ಉಮೇಶ್ ಕತ್ತಿ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಕಾಂಗ್ರೆಸ್ಸಿನ 15 ಮಂದಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಯಾವುದೇ ಶಾಸಕರ ಹೆಸರುಗಳನ್ನು ಬಹಿರಂಗಪಡಿಸುವುದಿಲ್ಲ. ಇನ್ನು 24 ಗಂಟೆಗಳಲ್ಲೆ ದೋಸ್ತಿ ಸರ್ಕಾರ ಪತನವಾಗಲಿದೆ. ಅಲ್ಲದೇ ಮುಂಬರುವ ಒಂದು ವಾರದಲ್ಲೇ ಬಿಜೆಪಿ ರಾಜ್ಯದಲ್ಲಿ ಹೊಸ ಸರ್ಕಾರ ರಚಿಸುತ್ತದೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಮ್ಮ ಆತ್ಮೀಯ ಮಿತ್ರರು. ಅವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತವನ್ನು ಬಯಸುತ್ತೇವೆ. ಅಲ್ಲದೇ ಬಿಎಸ್‍ವೈ ಹಾಗೂ ರಮೇಶ್ ಇದೂವರೆಗೂ ಯಾವುದೇ ಗುಪ್ತ ಸಭೆ ನಡೆದಿಲ್ಲ. ಇಂದು ನಡೆಯಲಿರುವ ಸಭೆಯಲ್ಲಿ ಕೇವಲ ಬೆಳಗಾವಿ ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಆಯ್ಕೆ ವಿಚಾರವನ್ನು ಮಾತ್ರ ಚರ್ಚಿಸಲಾಗುತ್ತದೆ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply