ಲೋಕಸಮರದ ಹೊತ್ತಲ್ಲೇ ‘ಕೈ’ಗೆ ಶಾಕ್- ಬಿಜೆಪಿ ಸೇರಿದ ಡಾ.ಶುಶ್ರುತ್ ಗೌಡ

ಮೈಸೂರು/ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಮತ್ತೊಂದು ಆಪರೇಷನ್ ಕಮಲ ನಡೆದಿದೆ. ಲೋಕಸಮರದ ಹೊತ್ತಲ್ಲೇ ಮೈಸೂರು ಕಾಂಗ್ರೆಸ್‍ಗೆ ಶಾಕ್ ಕೊಟ್ಟಿದೆ.

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಡಾ.ಶುಶ್ರುತ್ ಗೌಡ (Dr Sushruth Gowda) ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ (BJP) ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಸಮ್ಮುಖದಲ್ಲಿ ಇಂದು ಡಾ. ಶುಶ್ರುತ್ ಗೌಡ ಬಿಜೆಪಿ ಸೇರಿದ್ದಾರೆ.

ಇವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‍ನಿಂದ (Congress) ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಇಂದು ಬಿಜೆಪಿ ಸೇರಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಅಶ್ವತ್ಥನಾರಾಯಣ್ ಉಪಸ್ಥಿತರಿದ್ದರು. ಇದನ್ನೂ ಓದಿ: ಪಿತ್ರೋಡಾ ಹೇಳಿಕೆ ಪಕ್ಷದ ಹೇಳಿಕೆಯಲ್ಲ- ಅಂತರ ಕಾಯ್ದುಕೊಂಡ ಕಾಂಗ್ರೆಸ್‌