ರಾಷ್ಟ್ರಪತಿ ಚುನಾವಣೆ – ಬಿಜೆಪಿಯಿಂದ ಅಭ್ಯರ್ಥಿಯಾಗಿ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಆಯ್ಕೆ

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಮುಂಬರುವ ಚುನಾವಣೆಗೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರ ಹೆಸರನ್ನು ಘೋಷಿಸಿದೆ.

ಬಿಜೆಪಿ ಹಿರಿಯ ಮುಖಂಡರಾದ ದ್ರೌಪದಿ ಮುರ್ಮು ಅವರು 2015-21ರ ಅವಧಿಯಲ್ಲಿ ಜಾರ್ಖಂಡ್‌ನ ರಾಜ್ಯಪಾಲರಾಗಿದ್ದರು. 16ನೇ ರಾಷ್ಟ್ರಪತಿ ಚುನಾವಣೆಯ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಇದನ್ನೂ ಓದಿ: ವಿಶ್ವಸಂಸ್ಥೆಗೆ ಭಾರತದ ಕಾಯಂ ಪ್ರತಿನಿಧಿಯಾಗಿ ರುಚಿರಾ ಕಾಂಬೋಜ್ ನೇಮಕ

ದ್ರೌಪದಿ ಮುರ್ಮು ಅವರು ಒಡಿಸ್ಸಾದ ಮಾಯರ್ಭಾಂಜ್‌ ಜಿಲ್ಲೆಯವರಾಗಿದ್ದಾರೆ. ಇವರು ಬುಡಕಟ್ಟು ಜನಾಂಗ ಮೂಲದ ಮಹಿಳೆಯಾಗಿದ್ದು, ಪಕ್ಷದ ನೇತೃತ್ವದಲ್ಲಿ ನಾನಾ ಸ್ಥಾನಗಳನ್ನು ಅಲಂಕರಿಸಿ ಸೇವೆ ಸಲ್ಲಿಸಿದ್ದಾರೆ.

ಇಂದು ಸಂಜೆಯಷ್ಟೇ ವಿಪಕ್ಷಗಳು ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಆಯ್ಕೆ ಮಾಡಿದ್ದರು. ಇದರ ಬೆನ್ನಲ್ಲೇ ಎನ್‌ಡಿಎ ಒಕ್ಕೂಟದಿಂದ ಅಭ್ಯರ್ಥಿ ಘೋಷಿಸಲಾಗಿದೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.

`ದ್ರೌಪದಿ ಮುರ್ಮು ಅವರು ಸಮಾಜ ಸೇವೆಗೆ ಮತ್ತು ಬಡವರು, ದೀನದಲಿತರು ಹಾಗೂ ಸಮಾಜದ ಅಂಚಿನಲ್ಲಿರುವವರ ಸಬಲೀಕರಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅವರು ಶ್ರೀಮಂತ ಆಡಳಿತಾತ್ಮಕ ಅನುಭವವನ್ನು ಹೊಂದಿದ್ದಾರೆ. ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ನಮ್ಮ ರಾಷ್ಟ್ರದ ಶ್ರೇಷ್ಠ ರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸ ನನಗಿದೆʼ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿದ್ದಾರೆ.

Live Tv

Comments

Leave a Reply

Your email address will not be published. Required fields are marked *