ಬೆಂಗಳೂರು: ಅಪಘಾತವಾಗಿ ನಿಂತಿದ್ದ ತಮಿಳುನಾಡು ಸಾರಿಗೆ ಬಸ್‍ಗೆ ಹಿಂಬದಿಯಿಂದ ಲಾರಿ ಬಂದು ಗುದ್ದಿದ ಪರಿಣಾಮ ತಮಿಳುನಾಡು ಸಾರಿಗೆ ಬಸ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

ಮೃತ ಚಾಲಕನನ್ನು ಶಿವಕುಮಾರ್(35) ಎಂದು ಗುರುತಿಸಲಾಗಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಮುಂಜಾನೆ ತಮಿಳುನಾಡು ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್‍ಗೆ ಡಿಕ್ಕಿ ಹೊಡೆದಿದೆ. ಇದರಿಂದ ಬಸಿನಲ್ಲಿದ್ದ ಪ್ರಯಾಣಿಕರನ್ನು ಚಾಲಕ ಬೇರೊಂದು ಬಸ್‍ಗೆ ಕಳುಹಿಸಿದ್ದಾರೆ. ನಂತರ ಚಾಲಕ ಶಿವಕುಮಾರ್ ಬಸ್ ಹಿಂಭಾಗ ಪರಿಶೀಲನೆ ನಡೆಸುತ್ತಾ ನಿಂತಿದ್ದರು.

ಈ ಸಂದರ್ಭದಲ್ಲಿ ವೇಗವಾಗಿ ಬಂದ ಲಾರಿ ಬಸ್‍ಗೆ ಡಿಕ್ಕಿ ಹೊಡೆದಿದೆ. ಎರಡು ವಾಹನದ ಮಧ್ಯೆ ಸಿಲುಕಿದ ಶಿವಕುಮಾರ್ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಘಟನೆಯಲ್ಲಿ ಲಾರಿ ಚಾಲಕ ಮತ್ತು ಕ್ಲೀನರ್‍ಗೆ ಗಂಭೀರವಾಗಿ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಸ್ಥಳಕ್ಕೆ ಸೂರ್ಯಸಿಟಿ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದು, ಎರಡು ವಾಹನಗಳನ್ನು ಕ್ರೇನ್ ಮೂಲಕ ಬೆರ್ಪಡಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.













Leave a Reply