ವಿಜಯಪುರ: ಜಿಲ್ಲೆಯ ಸಿಂಧಗಿ ತಾಲೂಕಿನ ಮೊರಟಗಿ ಸರ್ಕಾರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನೊಬ್ಬ ಕುಡಿದ ಅಮಲಿನಲ್ಲಿ ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
4ನೇ ತರಗತಿಯ ನಿಂಗಪ್ಪ ಹಲ್ಲೆಗೊಳಗಾದ ವಿದ್ಯಾರ್ಥಿ. ಸಹ ಶಿಕ್ಷಕ ನಗನೂರ ಹಲ್ಲೆ ನಡೆಸಿದ ಆರೋಪಿ. ಶಿಕ್ಷಕ ಶಾಲೆಗೆ ಪಾನಮತ್ತನಾಗಿ ಆಗಮಿಸಿದ್ದು, ನಶೆಯಲ್ಲಿ ನಿಂಗಪ್ಪನಿಗೆ ಮನಬಂದಂತೆ ಥಳಿಸಿದ್ದಾನೆ. ಈ ವೇಳೆ ನಿಂಗಪ್ಪನ ಕಣ್ಣಿಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ವಿದ್ಯಾರ್ಥಿ ನೆಲದ ಮೇಲೆ ಬಿದ್ದು ಹೊರಳಾಡಿದ್ದಾನೆ. ವಿದ್ಯಾರ್ಥಿ ನೋವಿನಿಂದ ಅಳುತ್ತಿದ್ದನ್ನು ನೋಡಿ ಗಾಬರಿಯಾದ ಶಿಕ್ಷಕ ಪರಾರಿಯಾಗಿದ್ದಾನೆ. ಇದನ್ನು ಓದಿ: ಸ್ಕೇಲ್‍ನಿಂದ ಹೊಡೆದ ಟೀಚರ್- ವಿದ್ಯಾರ್ಥಿ ಕಣ್ಣಿನ ದೃಷ್ಟಿಯೇ ಹೋಯ್ತು!
ಸದ್ಯ ನಿಂಗಪ್ಪನನ್ನು ಜಿಲ್ಲಾಸ್ಪತ್ರೆಗೆ ದಾಖಲಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಿಕ್ಷಕನ ಅಮಾನವೀಯ ಕೃತ್ಯಕ್ಕೆ ನಿಂಗಪ್ಪನ ಪೋಷಕರು ಹಾಗೂ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಂಧಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply