1950ರಲ್ಲೇ ಈದ್ಗಾ ಮೈದಾನ ಮೈಸೂರು ಸಂಸ್ಥಾನದ ಅಧೀನಕ್ಕೆ ಒಳಪಟ್ಟಿತ್ತು: ದಾಖಲೆ ರಿಲೀಸ್

ಬೆಂಗಳೂರು: ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನವನ್ನು ಜುಲೈ 31ರ ಒಳಗೆ ಸರ್ಕಾರದ ಸ್ವತ್ತೆಂದು ಘೋಷಿಸಬೇಕು. ಮೈದಾನಕ್ಕೆ 10ನೇ ಚಾಮರಾಜ ಒಡೆಯರ್ ಅವರ ಹೆಸರು ನಾಮಕರಣ ಮಾಡಬೇಕು ಎಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟ ವೇದಿಕೆಯ ಪ್ರಧಾನ ಕಾರ್ಯದರ್ಶಿ ರುಕ್ಮಾಂಗದ ಒತ್ತಾಯಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಈದ್ಗಾ ಮೈದಾನವನ್ನು ಜುಲೈ 31ರೊಳಗೆ ಸರ್ಕಾರದ ಸ್ವತ್ತೆಂದು ಘೋಷಿಸಬೇಕು. ಚಾಮರಾಜಪೇಟೆ ಬಂದ್ ಮಾಡಿದ್ದರಿಂದ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: ಚುನಾವಣೆ ಬಂತು ಅಂದ್ರೆ ಮೋದಿ ಎರಡು ಬಾಂಬ್ ಇಟ್ಟುಕೊಂಡಿರುತ್ತಾರೆ: ಸತೀಶ್ ಜಾರಕಿಹೊಳಿ

ಚಾಮರಾಜಪೇಟೆ ಜನತಾ ಹೋಟೆಲ್ ಮುಂಭಾಗ, ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನ, ಟಿ.ಆರ್.ಮಿಲ್ ಸರ್ಕಲ್, ಮಕ್ಕಳ ಕೂಟ, ಜಿಂಕೆ ಪಾರ್ಕ್ ಸೇರಿದಂತೆ ಚಾಮರಾಜಪೇಟೆಯ ಒಟ್ಟು 6 ಭಾಗಗಳಲ್ಲಿ ಸಹಿ ಸಂಗ್ರಹ ಅಭಿಯಾನ ಕೈಗೊಳ್ಳಲಾಗಿದೆ. ಸಹಿ ಸಂಗ್ರಹಿಸಿ ಪ್ರಧಾನ ಮಂತ್ರಿಗಳಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಒಂದು ಪ್ರತಿಯನ್ನು ಕಳುಹಿಸುತ್ತೇವೆ. ಸದ್ಯದಲ್ಲೇ ರಾಜ್ಯಪಾಲರನ್ನ ಭೇಟಿ ಮಾಡಿ ಮನವಿ ಮಾಡಲಿದ್ದೇವೆ. ಇದನ್ನು ಆಟದ ಮೈದಾನವಾಗಿಯೇ ಉಳಿಯಬೇಕೆಂದು ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ಈದ್ಗಾ ಮೈದಾನ ಸರ್ಕಾರದ ಸ್ವತ್ತು ಎಂಬುದಕ್ಕೆ ಮತ್ತೊಂದು ದಾಖಲೆ ಬಿಡುಗಡೆ ಮಾಡಿದೆ. ದಾಖಲೆಯಲ್ಲಿ ಇದು ಮೈಸೂರು ಸಂಸ್ಥಾನದ ಅಧೀನಕ್ಕೆ ಒಳಪಡುವ ಸ್ವತ್ತು ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಡ್ರೋನ್‌ಗೆ ಗುಂಡು -ಸೇನೆಯ ದಾಳಿಗೆ ಮರಳಿ ಪಾಕಿಗೆ ಓಡಿ ಹೋಯ್ತು

1950ರಲ್ಲೇ ಈದ್ಗಾ ಮೈದಾನ ಮೈಸೂರು ಸಂಸ್ಥಾನದ ಅಧೀನಕ್ಕೆ ಒಳಪಟ್ಟಿತ್ತು. ಇದನ್ನು ಯಾವುದೇ ದರ್ಗಾಕ್ಕೆ ನೀಡಿಲ್ಲ ಎಂಬುದರ ಕುರಿತು ದಾಖಲೆಯಲ್ಲಿ ಗಡಿ ಸಮೇತ ಸ್ಪಷ್ಟವಾಗಿ ಉಲ್ಲೇಖವಾಗಿದೆ. 1950ರಲ್ಲಿ ನಡೆದ ಸಿಟಿಎಸ್ ನಲ್ಲಿ ಈ ಮೈದಾನ ಸರ್ಕಾರದ್ದು ಎಂದು ಉಲ್ಲೇಖಿಸಲಾಗಿದೆ. ಇದಕ್ಕೆ ಸಂಬಂಧಿಸಿದ ಆರ್‌ಟಿಐ ದಾಖಲೆ ಪ್ರತಿಯನ್ನು ಬಿಬಿಎಂಪಿಗೆ ಸಲ್ಲಿಕೆ ಮಾಡಲಾಗಿದೆ ಎಂದು ನಾಗರಿಕ ಒಕ್ಕೂಟ ವೇದಿಕೆ ಹೇಳಿದೆ.

ಬೆಂಗಳೂರಿಗೆ ಮೊಟ್ಟ ಮೊದಲ ಬಡಾವಣೆ ಆಗಿದ್ದೇ ಚಾಮರಾಜಪೇಟೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತದಲ್ಲಿ ಬಡಾವಣೆ ನಿರ್ಮಾಣವಾಯಿತು. ಹಾಗಾಗಿ ಈಗಿರುವ ಈದ್ಗಾ ಮೈದಾನ 2.10 ಎಕರೆ ಜಾಗದಲ್ಲಿ ಮೊದಲು ಸಂತೆಗೆ ಎಂದು ಮೀಸಲಿರಿಸಲಾಗಿತ್ತು. ಆ ನಂತರ ಇದು ಆಟದ ಮೈದಾನವಾಗಿ ಬಳಕೆಯಾಯಿತು. ಅದಕ್ಕಾಗಿ ಮೈಸೂರು ಅರಸರ ಹೆಸರಿನಲ್ಲಿ ಮೈದಾನಕ್ಕೆ ನಾಮಕರಣ ಮಾಡಬೇಕು ಎಂದು ಚಾಮರಾಜಪೇಟೆ ನಾಗರಿಕ ಒಕ್ಕೂಟದ ಕಾರ್ಯದರ್ಶಿ ರುಕ್ಮಾಂಗದ ಒತ್ತಾಯಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *