ಹಾಸನ, ಅರಕಲಗೂಡು, ಹೊಳೆನರಸೀಪುರ ತಾಲೂಕಿನಲ್ಲಿ ಕಂಪಿಸಿದ ಭೂಮಿ – ಜನರಲ್ಲಿ ತೀವ್ರ ಆತಂಕ

ಹಾಸನ: ಜಿಲ್ಲೆಯಲ್ಲಿ ಲಘು ಭೂಕಂಪನ ಸಂಭವಿಸಿದೆ. ಹಾಸನ, ಹೊಳೆನರಸೀಪುರ, ಅರಕಲಗೂಡು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದೆ.

ಅರಕಲಗೂಡು ತಾಲೂಕಿನ ಬೆಳವಾಡಿ, ಹನೆಮಾರನಹಳ್ಳಿ, ಕಾರಹಳ್ಳಿ, ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದೆ. ಬೆಳಗಿನ ಜಾವ 4.38ರ ಸಮಯದಲ್ಲಿ ಭೂಕಂಪನದ ಅನುಭವವಾಗಿದ್ದು ಜನರೆಲ್ಲಾ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ನದಿಯಲ್ಲಿ ಪತ್ನಿಗೆ ಕಿಸ್‌ ಮಾಡಿದ ಪತಿಯನ್ನೇ ಥಳಿಸಿದ ಸಾರ್ವಜನಿಕರು… Video Viral

ಹಾಸನ ತಾಲೂಕಿನ ಮಲ್ಲೆದೇವರಪುರ, ಕಾರ್ಲೆ ಅಂಕನಹಳ್ಳಿ ಗ್ರಾಮದ ಸುತ್ತಮುತ್ತಲೂ ಬೆಳಗ್ಗೆ 4.52 ನಿಮಿಷದಲ್ಲಿ ಭೂಮಿ ನಡುಗಿದ ಅನುಭವ ಆಗಿದೆ. ಭೂಕಂಪಕ್ಕೆ ನಿದ್ದೆಯಲ್ಲಿದ್ದವರು ಬೆಚ್ಚಿಬಿದ್ದಿದ್ದಾರೆ. ಮನೆಗಳಲ್ಲಿ ಬಿರುಕು ಬಿಟ್ಟಿದೆ. ಈ ಮಧ್ಯೆ, ಅಫ್ಘಾನಿಸ್ಥಾನದಲ್ಲಿ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 1,000 ದಾಟಿದೆ. 1,800ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಜೆಪಿ ನಡ್ಡಾ ನಿವಾಸಕ್ಕೆ ಬೆಂಕಿ ಹಚ್ಚಲು ಯತ್ನಿಸಿದ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ಬಂಧನ

Live Tv

Comments

Leave a Reply

Your email address will not be published. Required fields are marked *