ಆನ್‌ಲೈನ್‌ ಟ್ರೇಡಿಂಗ್‌ ಹೆಸರಲ್ಲಿ ವಂಚನೆ – ಬೆಂಗಳೂರಲ್ಲಿ ಇ.ಡಿಯಿಂದ ನಾಲ್ವರ ಬಂಧನ

ಬೆಂಗಳೂರು: ಆನ್‌ಲೈನ್‌ ಟ್ರೇಡಿಂಗ್‌ ಹೆಸರಲ್ಲಿ ಸೈಬರ್‌ ಹೂಡಿಕೆ ವಂಚನೆ ಮಾಡುತ್ತಿದ್ದ ಬೆಂಗಳೂರಿನ (Bengaluru) ಒಬ್ಬ ಸೇರಿದಂತೆ ನಾಲ್ವರು ಆರೋಪಿಗಳನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.

ಶಶಿಕುಮಾರ್ (25), ಸಚಿನ್ (26), ಕಿರಣ್ ಎಸ್‌ಕೆ (25) ಮತ್ತು ಚರಣ್ ರಾಜ್ (26) ಬಂಧಿತ ಆರೋಪಿಗಳು. ಇವರು ಷೇರು ಮಾರುಕಟ್ಟೆಯಲ್ಲಿ ನಕಲಿ‌ ಕಂಪನಿಗಳ ಹೆಸರಲ್ಲಿ ಹಣಹೂಡಿಕೆ ಮಾಡಿಸಿಕೊಳ್ಳುತ್ತಿದ್ದರು. ಇದನ್ನೂ ಓದಿ: ಬೈಕ್‌ಗೆ ಕಾರು ಡಿಕ್ಕಿ: ಫ್ಲೈಓವರ್ ಮೇಲಿನಿಂದ ಕೆಳಗೆ ಬಿದ್ದ ಕಾರು – ಮೂವರ ಸ್ಥಿತಿ ಗಂಭೀರ

ನಕಲಿ ದಾಖಲೆ ನೀಡಿ ಹತ್ತಾರು ಬ್ಯಾಂಕ್ ಅಕೌಂಟ್ ತೆರೆದಿದ್ದರು. ಹಣ ವರ್ಗಾವಣೆ ಆದ ನಂತರ ಬೇರೆ ಬೇರೆ ಅಕೌಂಟ್‌ಗೆ ಟ್ರಾನ್ಸ್‌ಫರ್‌ ಮಾಡಿಕೊಳ್ಳುತ್ತಿದ್ದರು. ನಂತರ ಹಣ ಜಮಾ ಮಾಡಿದವರ ನಂಬರ್ ಬ್ಲಾಕ್ ಮಾಡುತ್ತಿದ್ದರು. ಈ ಬಗ್ಗೆ ಬೆಂಗಳೂರು ಸೈಬರ್ ಠಾಣೆಗಳಲ್ಲಿ ಹತ್ತಾರು ದೂರು ದಾಖಲಾಗಿದ್ದವು.

ಕೋಟ್ಯಂತರ ರೂಪಾಯಿ ಬೇನಾಮಿ ಹಣ ಟ್ರಾನ್ಸ್‌ಫರ್ ಆಗಿದ್ದ ಹಿನ್ನೆಲೆ ಇಡಿ ಅಧಿಕಾರಿಗಳಿಗೆ ಸೈಬರ್‌ ಕ್ರೈಂ ಪೊಲೀಸರು ಮಾಹಿತಿ ನೀಡಿದ್ದರು. ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳು ನಾಲ್ವರನ್ನು ಬಂಧಿಸಿ, ಇಡಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ನಾಲ್ವರು ಆರೋಪಿಗಳನ್ನು ಏಳು ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ದನ ಕಳ್ಳಸಾಗಾಣಿಕೆ ಮಾಡಿದ್ದಾರೆ ಎಂದು ಪಿಯುಸಿ ವಿದ್ಯಾರ್ಥಿಯ ಹತ್ಯೆ – ಐವರು ಅರೆಸ್ಟ್