ಸೋನಿಯಾ, ರಾಹುಲ್ ಗಾಂಧಿಗೆ ಇಡಿ ಸಮನ್ಸ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ.

ಜೂನ್ 2 ರಂದು ರಾಹುಲ್ ಗಾಂಧಿ ಮತ್ತು ಜೂನ್ 8 ರಂದು ಸೋನಿಯಾ ಗಾಂಧಿ ವಿಚಾರಣೆಗೆ ಆಗಮಿಸಬೇಕೆಂದು ಸಮನ್ಸ್‌ನಲ್ಲಿ ತಿಳಿಸಲಾಗಿದೆ. ರಾಹುಲ್ ಗಾಂಧಿ ವಿಚಾರಣೆ ಹಾಜರಾಗಲು ಹೆಚ್ಚುವರಿ ಸಮಯ ಕೇಳುವ ಸಾಧ್ಯತೆಗಳಿದ್ದು, ಸೋನಿಯಾ ಗಾಂಧಿ ನಿಗದಿತ ದಿನಾಂಕದಂದು ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ಹೇಳಿವೆ. ಇದನ್ನೂ ಓದಿ: ನಕಲಿ ಗಾಂಧಿಗಳ ನಾಯಕತ್ವಕ್ಕೆ ಕಾಂಗ್ರೆಸ್ ಕಾರ್ಯಕರ್ತರೇ ಬೇಸತ್ತಿದ್ದಾರೆ – ಎಚ್ಚರ ಡಿಕೆಶಿ ಎಚ್ಚರ: ಬಿಜೆಪಿ

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಪ್ರಶ್ನೆ ಮಾಡಲು ಇಡಿ ಅಧಿಕಾರಿಗಳು ಇಚ್ಛಿಸಿದ್ದಾರೆ ಎಂದು ಇಡಿ ಮೂಲಗಳು ಹೇಳಿವೆ.

2012 ರಲ್ಲಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫೆರ್ನಾಂಡಿಸ್, ಸುಮನ್ ದುಬೆ ಮತ್ತು ಸ್ಯಾಮ್ ಪಿತ್ರೋಡಾ ವಿರುದ್ಧ ದೂರು ಸಲ್ಲಿಸಿದ್ದರು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವವನ್ನು ಪಡೆಯುವಲ್ಲಿ ವಂಚನೆ ಮಾಡಲಾಗಿದ್ದು, ಇಲ್ಲಿ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ತನಿಖೆಗೆ ಮನವಿ ಮಾಡಿದ್ದರು. ಇದನ್ನೂ ಓದಿ: ಚಾರ್‌ಮಿನಾರ್ ಬಳಿ ಪ್ರಾರ್ಥನೆ ಸಲ್ಲಿಸಲು ಅನುಮತಿ ಕೊಡಿ- ಕಾಂಗ್ರೆಸ್ ನಾಯಕನಿಂದ ಸಹಿ ಸಂಗ್ರಹ ಅಭಿಯಾನ

ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತಿಚೆಗೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಸತತ 8 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿ ಹಲವು ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕಿದ್ದರು.

Comments

Leave a Reply

Your email address will not be published. Required fields are marked *