ಟಿಪ್ಪರ್ ಲಾರಿ, ಈಚರ್ ನಡುವೆ ಡಿಕ್ಕಿ – ವೃದ್ಧೆ ಸಾವು, 15 ಮಂದಿಗೆ ಗಾಯ

ಚಿತ್ರದುರ್ಗ: ಟಿಪ್ಪರ್ ಲಾರಿ ಹಾಗೂ ಈಚರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ವೃದ್ಧೆ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಹೊರವಲಯದಲ್ಲಿ ತಡರಾತ್ರಿ ನಡೆದಿದೆ.

ಮೃತ ಮಹಿಳೆಯನ್ನು ರತ್ನಮ್ಮ (70) ಶಿರಾ ಮೂಲದ ದ್ವಾರನಕುಂಟೆ ನಿವಾಸಿ ಎಂದು ಗುರುತಿಸಲಾಗಿದೆ. ಚಳ್ಳಕೆರೆ ತಾಲ್ಲೂಕಿನ ಶ್ರೀ ಕ್ಷೇತ್ರ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ತೆರಳಿ, ಪೂಜೆ ಮುಗಿಸಿ ವಾಪಸ್ಸಾಗುವ ವೇಳೆ ಈ ದುರ್ಘಟನೆ ನಡೆದಿದೆ. ಇದನ್ನೂ ಓದಿ: ಮಹಿಳೆಯರಿಗೆ ಸುರಕ್ಷಿತವಲ್ಲ ರಾಷ್ಟ್ರ ರಾಜಧಾನಿ ದೆಹಲಿ

ಈ ಘಟನೆಯಿಂದಾಗಿ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಎಸ್‍ಪಿ ರಾಧಿಕಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಇದನ್ನೂ ಓದಿ: ಎಸ್‍ಸಿ, ಎಸ್‍ಟಿಗಳ ಮೇಲೆ ಹೆಚ್ಚಿದ ದೌರ್ಜನ್ಯ ಪ್ರಕರಣಗಳು- ಎನ್‌ಸಿಆರ್‌ಬಿ ವರದಿ

ಚಾಲಕರ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ ಎಂದು ಮೆಲ್ನೋಟಕ್ಕೆ ತಿಳಿದುಬಂದಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *