ಬಿಜೆಪಿ ಥೀಮ್ ಸಾಂಗ್‍ಗಳಿಗೆ ಡ್ಯಾನ್ಸ್ ಮಾಡ್ತಿದ್ದವರ ಮೇಲೆ ಎಸ್‍ಪಿ ಕಾರ್ಯಕರ್ತರಿಂದ ಹಲ್ಲೆ

ಲಕ್ನೋ: ಬಿಜೆಪಿಯ ಚುನಾವಣಾ ಪ್ರಚಾರದ ಹಾಡುಗಳಿಗೆ ನೃತ್ಯ ಮಾಡುತ್ತಿದ್ದ ಗ್ರಾಮಸ್ಥರ ಮೇಲೆ ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಕಾನ್ಪುರ ದೇಹತ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಜಿಲ್ಲೆಯ ರಸೂಲಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಸಂಭ್ರಮಾಚರಣೆಗಾಗಿ ತಮ್ಮ ಮನೆಯಲ್ಲಿ ಡಿಜೆ ಹಾಕಿ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ಥಳೀಯರು ಬಿಜೆಪಿ ಚುನಾವಣಾ ಥೀಮ್ ಸಾಂಗ್‍ಗಳಿಗೆ ಕುಣಿಯುತ್ತಿದ್ದರು. ಸ್ಥಳಕ್ಕೆ ಬಂದ ಸಮಾಜವಾದಿ ಪಕ್ಷದ ಕಾರ್ಯಕರ್ತರು ಬಿಜೆಪಿ ಚುನಾವಣಾ ಥೀಮ್ ಹಾಡುಗಳನ್ನು ಪ್ಲೇ ಮಾಡುವುದನ್ನು ನಿಲ್ಲಿಸುವಂತೆ ಡಿಜೆ ಆಯೋಜಕರನ್ನು ಕೇಳಿದರು. ಡಿಜೆ ಆಯೋಜಕರು ಕೇಳದೆ ಇದ್ದಾಗ ಆತನನ್ನು ನಿಂದಿಸಿ, ಥಳಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದನ್ನೂ ಓದಿ: ಜಮ್ಮು, ಕಾಶ್ಮೀರ ಬಜೆಟ್ ಮಂಡಿಸಲಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೂರಿನ ಮೇರೆಗೆ ಭಾರತೀಯ ದಂಡ ಸಂಹಿತೆಯ ಸಂಬಂಧಿತ, ಸೆಕ್ಷನ್‍ಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ ಎಂದು ರಸೂಲಾಬಾದ್ ಪೊಲೀಸ್ ಠಾಣೆಯ ಉಸ್ತುವಾರಿ ಪ್ರಮೋದ್ ಕುಮಾರ್ ಶುಕ್ಲಾ ಹೇಳಿದ್ದಾರೆ. ಇದನ್ನೂ ಓದಿ: ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಭಗವಂತ್ ಮಾನ್

ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳಿಹೆರ ಹುಡುಕಾಟ ನಡೆಸಲಾಗುತ್ತಿದೆ. ಶುಕ್ರವಾರ ರಾತ್ರಿ, ಔರಯ್ಯ ಜಿಲ್ಲೆಯಲ್ಲಿ, ಬಿಜೆಪಿಯ ಚುನಾವಣಾ ಹಾಡುಗಳನ್ನು ನುಡಿಸುವಾಗ ಮದುವೆ ಮೆರವಣಿಗೆಯ ಮೇಲೆ ದಾಳಿ ನಡೆಸಿರುವುದು ಕೆಲವು ದಿನಗಳ ಹಿಂದೆ ಸುದ್ದಿಯಾಗಿತ್ತು.

Comments

Leave a Reply

Your email address will not be published. Required fields are marked *