ದಾಖಲೆ ಇಲ್ಲದ 2.55 ಕೋಟಿ ರೂ. ಮೌಲ್ಯದ ಚಿನ್ನ ವಶ

ಧಾರವಾಡ: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ಚುನಾವಣಾ ಆಯೋಗ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ಮಾಡುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಇಂದು ಸುಮಾರು 2.55 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಲಘಟಗಿ ತಾಲೂಕಿನ ಕಡಬಗಸ್ತಿ ಗ್ರಾಮದ ಚೆಕ್ ಪೋಸ್ಟ್ ನಲ್ಲಿ ವಶಕ್ಕೆ  ಪಡೆದಿದೆ.

ಗೋವಾದಿಂದ ಹುಬ್ಬಳ್ಳಿ ಮಾರ್ಗವಾಗಿ ಯಾವುದೇ ದಾಖಲೆ ಇಲ್ಲದೇ ಆಕ್ರಮವಾಗಿ ಸಾಗಾಣೆ ಮಾಡುತ್ತಿದ್ದ ಸುಮಾರು 7 ಕೆಜಿ 722 ಗ್ರಾಂ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಚಿನ್ನ ಸಾಗಾಣೆ ಮಾಡುತ್ತಿದ್ದ ಗೋವಾ ಮೂಲದ ಪ್ರತೀಕ ನಾರ್ವೇಕರ್ ಹಾಗೂ ರಾಜಸ್ಥಾನ ಮೂಲದ ವಿಕ್ರಮಸಿಂಗ್ ರಾಠೋಡ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಾಖಲೆ ಇಲ್ಲದೆ ಅಕ್ರಮವಾಗಿ ಚಿನ್ನ ಸಾಗಾಣೆ ಮಾಡುತ್ತಿದ್ದ ಆರೋಪದ ಅಡಿ ಇಬ್ಬರ ವಿರುದ್ಧ ಅಳ್ನಾವರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜಿಲ್ಲಾಧಿಕಾರಿ ಎಸ್‍ಬಿ ಬೊಮ್ಮನಹಳ್ಳಿ, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಡಿಸಿಎಫ್ ಮಹೇಶಕುಮಾರ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ ನೇತೃತ್ವದಲ್ಲಿ ಚಿನ್ನ ಜಪ್ತಿ ಮಾಡಲಾಗಿದೆ. ಇಷ್ಟು ದೊಡ್ಡ ಪ್ರಮಾಣದ ಚಿನ್ನ ಗೋವಾ ಮೂಲದ ಚಿನ್ನದ ವ್ಯಾಪಾರಿಗೆ ಸೇರಿದ್ದು ಎನ್ನಲಾಗಿದೆ.

Comments

Leave a Reply

Your email address will not be published. Required fields are marked *