ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಇತರೆ ಕಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಲ್ಪಿಸಲು ಇರುವ ಸಮಸ್ಯೆಗಳ ಕುರಿತಂತೆ ಮಹತ್ವದ ಸಭೆ ನಡೆಯಿತು.
ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು. 2024ರ ಡಿ.17ರಂದು ಸರ್ವೋಚ್ಛ ನ್ಯಾಯಾಲಯದ ಆದೇಶದ ನಂತರ ಗ್ರೇಟರ್ ಬೆಂಗಳೂರು ಸೇರಿದಂತೆ ರಾಜ್ಯ ವ್ಯಾಪ್ತಿಯಲ್ಲಿ ಸಿಸಿ ಮತ್ತು ಓಸಿ ಇಲ್ಲದೇ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಲು ಸಮಸ್ಯೆ ಉಂಟಾಗಿರುವ ಬಗ್ಗೆ ಚರ್ಚೆ ನಡೆಸಲಾಯಿತು.ಇದನ್ನೂ ಓದಿ: ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್- ನೇಮಕಾತಿಗಳಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ
ಸುಪ್ರೀಂಕೋರ್ಟ್ನ ಆದೇಶ ಭಾರತದ ಎಲ್ಲ ರಾಜ್ಯಗಳಿಗೂ ಅನ್ವಯವಾಗುತ್ತಿದ್ದೂ, ಎಲ್ಲ ರಾಜ್ಯಗಳೂ ಆದೇಶವನ್ನು ಅನುಷ್ಠಾನಗೊಳಿಸುತ್ತಿವೆಯೇ? ಪರಿಶೀಲಿಸಲು ಮುಖ್ಯಮಂತ್ರಿಗಳು ಸೂಚಿಸಿದರು ಎನ್ನಲಾಗಿದೆ. ನಿಯಮ ಉಲ್ಲಂಘಿಸಿ ನಿರ್ಮಾಣಗೊಂಡಿರುವ ಕಟ್ಟಡಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಅನುಮತಿ ನೀಡುವ ಸಾಧ್ಯತೆ ಬಗ್ಗೆ ಚರ್ಚೆ ನಡೆಸಲಾಗಿದ್ದು, ನಿರ್ಮಾಣಗೊಂಡಿರುವ ಕಟ್ಟಡಗಳನ್ನು ನೆಲಸಮಗೊಳಿಸಲು ಸಾಧ್ಯವಿಲ್ಲ. ಸರ್ಕಾರದ ನಿರ್ಧಾರದಿಂದ ಜನರಿಗೆ ಅನುಕೂಲವಾಗಬೇಕು. ಸೂಕ್ತ ಅನುಮತಿಗಳಿಲ್ಲದೇ ಈಗಾಗಲೇ ಮನೆ ನಿರ್ಮಿಸಿ ವಾಸವಿದ್ದಾರೆ. ಅಂತಹವರಿಗೆ ಒಂದು ಬಾರಿಗೆ ಅನ್ವಯವಾಗುವಂತೆ ನಿಯಮಿತಗೊಳಿಸಲು ಕಾನೂನಿನಲ್ಲಿ ಅವಕಾಶವಿರುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ.
ಸುಪ್ರೀಂಕೋರ್ಟ್ ಆದೇಶ ಅನುಷ್ಠಾನಗೊಳ್ಳುವ ಮುಂಚೆ ಸಲ್ಲಿಕೆಯಾಗಿರುವ ಮಾರ್ಚ್ 2025ರವರೆಗಿನ ಅರ್ಜಿಗಳನ್ನು ಪರಿಗಣಿಸಿ ಒಸಿ ಮತ್ತು ಸಿಸಿಯಿಂದ ವಿನಾಯ್ತಿಗೊಳಿಸಿ, ವಿದ್ಯುತ್ ಮತ್ತು ನೀರಿನ ಸಂಪರ್ಕ ನೀಡುವ ಬಗ್ಗೆ ಕಾನೂನಿನ ಸಾಧ್ಯತೆಗಳ ಬಗ್ಗೆ ಕೂಲಂಕುಷವಾಗಿ ಚರ್ಚಿಸಬೇಕು. ಹೀಗಾಗಿ ಅ.8ರಂದು ಸರ್ಕಾರದ ಮುಖ್ಯಕಾರ್ಯದರ್ಶಿಗಳು, ಸಂಬಂಧಪಟ್ಟ ಇಲಾಖಾ ಸಚಿವರು, ಸರ್ಕಾರದ ಅಡ್ವೋಕೇಟ್ ಜನರಲ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಆದಾದ ಬಳಿಕ ಅ.9ರಂದು ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಅಂತಿಮ ತೀರ್ಮಾನ ಪ್ರಕಟಿಸಲು ರಾಜ್ಯ ಸರ್ಕಾರ ಮುಂದಾಗಿದೆ.ಇದನ್ನೂ ಓದಿ: ಬಿಡದಿ ಟೌನ್‌ಶಿಪ್ ಜಟಾಪಟಿ – ಡಿಕೆಶಿ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ
