ಪರಿಣಿತಿ ಜೊತೆಗಿನ ಎಂಗೇಜ್ ಮೆಂಟ್ ವಿಚಾರ: ಹೇಳ್ತೀನಿ ಎಂದು ತಪ್ಪಿಸಿಕೊಂಡ ಎಎಪಿ ಮುಖಂಡ

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ (Parineeti Chopra) ಜೊತೆ ಎಎಪಿ ಮುಖಂಡ, ಸಂಸದ ರಾಘವ್ ಚಡ್ಡಾ (Raghav Chadha) ಕಾಣಿಸಿಕೊಂಡ ವಿಚಾರ ಹತ್ತು ಹಲವು ಅನುಮಾನಕ್ಕೆ ಕಾರಣವಾಗಿತ್ತು. ಇಬ್ಬರೂ ಸದ್ಯದಲ್ಲೇ ಎಂಗೇಜ್ ಮೆಂಟ್ (Engagement) ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ಮಾಧ್ಯಮಗಳ ಮುಂದೆ ಮಾತನಾಡಲು ರಾಘವ್ ನಿರಾಕರಿಸಿದ್ದಾರೆ. ಮುಂದಿನ ದಿನಗಳಲ್ಲಿ ಹೇಳುತ್ತೇನೆ ಎಂದು ಅವರು ಜಾರಿಕೊಂಡಿದ್ದಾರೆ.

ಮೂಲಗಳ ಪ್ರಕಾರ ಪರಸ್ಪರ ಒಬ್ಬರನೊಬ್ಬರು ಪ್ರೀತಿಸುತ್ತಿರುವ ಈ ಜೋಡಿ ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗುತ್ತಿದೆ.  ದೆಹಲಿಯಲ್ಲಿ ಈ ವಾರವೇ ಅದ್ದೂರಿಯಾಗಿ ನಿಶ್ಚಿತಾರ್ಥ ಕೂಡ ನಡೆಯಲಿದೆಯಂತೆ. ಅದಕ್ಕಾಗಿ ಈ ಜೋಡಿ ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡಿದ್ದಾರಂತೆ. ಇದನ್ನೂ ಓದಿ: ರಾಕಿಭಾಯ್ ಹೆಸರಿನಲ್ಲಿ ಸಲ್ಮಾನ್ ಖಾನ್‌ಗೆ ಧಮ್ಕಿ

ಪ್ರಿಯಾಂಕಾ ಚೋಪ್ರಾ (Priyanka Chopra) ಸಂಬಂಧಿ ನಟಿ ಪರಿಣಿತಿ ಚೋಪ್ರಾ ಕಳೆದ ಕೆಲ ದಿನಗಳಿಂದ ರಾಘವ್ ಚಡ್ಡಾ ಜೊತೆಗಿನ ಮದುವೆ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಇತ್ತೀಚಿಗೆ ಲಂಡನ್ ಮತ್ತು ಮುಂಬೈ ಏರ್‌ಪೋರ್ಟ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇಬ್ಬರ ಮದುವೆ ಬಗ್ಗೆ ಅದೆಷ್ಟೇ ಚರ್ಚೆ ನಡೆಯುತ್ತಾ ಇದ್ದರೂ ಇಬ್ಬರೂ ಸೈಲೆಂಟ್ ಆಗಿದ್ದಾರೆ.

ಹೀಗಿರುವಾಗ ಈ ವಾರವೇ ದೆಹಲಿಯಲ್ಲಿ ರಾಜಕಾರಣಿ ರಾಘವ್ ಜೊತೆ ಪರಿಣಿತಿ ಎಂಗೇಜ್‌ಮೆಂಟ್ ಫಿಕ್ಸ್ ಆಗಿದೆ. ಅದಕ್ಕಾಗಿ ಈಗಾಗಲೇ ಪರಿಣಿತಿ ಚೋಪ್ರಾ ದೆಹಲಿಗೆ (Dehli) ತೆರಳಿದ್ದಾರೆ. ನಿಶ್ಚಿತಾರ್ಥದ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಕುಟುಂಬದ ಆಪ್ತರಷ್ಟೇ ಈವೆಂಟ್‌ನಲ್ಲಿ ಭಾಗಿಯಾಗಲಿದ್ದಾರೆ.

ಪರಿಣಿತಿ ಚೋಪ್ರಾ ಎಂಗೇಜ್‌ಮೆಂಟ್‌ಗೆ ಭಾಗಿಯಾಗಲು ಈಗಾಗಲೇ ಪ್ರಿಯಾಂಕಾ ಚೋಪ್ರಾ- ನಿಕ್ ಜೋನಸ್ ಮತ್ತು ಮೀರಾ ಚೋಪ್ರಾ ಕೂಡ ದೆಹಲಿಯಲ್ಲಿದ್ದಾರೆ. ಅಧಿಕೃತವಾಗಿ ಈ ಬಗ್ಗೆ ಹೇಳದೇ ಇದ್ದರೂ ಕೂಡ ಪರಿಣಿತಿ-ರಾಘವ್ ನಿಶ್ಚಿತಾರ್ಥದ ಸಿದ್ಧತೆ ತೆರೆಮರೆಯಲ್ಲಿ ಭರದಿಂದ ನಡೆಯುತ್ತಿದೆ.