112 ರನ್‌ಗಳಿಗೆ 8 ವಿಕೆಟ್‌ ಉಡೀಸ್‌; ಸಿರಾಜ್‌ ಮಿಂಚಿನ ದಾಳಿಗೆ ಆಂಗ್ಲ ಪಡೆ ಕಂಗಾಲು, ಭಾರತಕ್ಕೆ ಮುನ್ನಡೆ

ರಾಜ್‌ಕೋಟ್: ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ 3ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 319 ರನ್‌ಗಳಿಗೆ ಇಂಗ್ಲೆಂಡ್‌ ಆಲೌಟ್‌ ಆಗಿದೆ.

238 ರನ್ ಹಿನ್ನಡೆಯೊಂದಿಗೆ ಶನಿವಾರ (ಇಂದು) ಬೆನ್ ಡಕೆಟ್ ಮತ್ತು ಜೋ ರೂಟ್ ಜೋಡಿ ಕ್ರೀಸ್ ಆರಂಭಿಸಿದ್ದರು. 2ನೇ ದಿನ ಬಿರುಸಿನ ಶತಕ ಬಾರಿಸಿದ್ದ ಡಕೆಟ್‌ 153 ರನ್‌ (151 ಎಸೆತ, 23 ಬೌಂಡರಿ, 2 ಸಿಕ್ಸರ್‌) ಗಳಿಸಿ ಔಟಾದರು. ಇದಕ್ಕೂ ಮುನ್ನವೇ ಜೋ ರೂಟ್‌ ಕೇವಲ 18 ರನ್‌ಗಳಿಗೆ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದ್ದರು. ಬಳಿಕ ಬೆನ್‌ಸ್ಟೋಕ್ಸ್‌ 41 ರನ್‌ ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರು ಟೀಂ ಇಂಡಿಯಾ ಬೌಲರ್‌ಗಳ ದಾಳಿ ಎದುರಿಸುವಲ್ಲಿ ವಿಫಲರಾದರು. ಪರಿಣಾಮ ಇಂಗ್ಲೆಂಡ್‌ 319 ರನ್‌ಗಳಿಗೆ ಆಲೌಟ್‌ ಆಯಿತು.

ಶುಕ್ರವಾರ 5 ವಿಕೆಟ್‌ಗೆ 326 ರನ್ ಗಳಿಸಿದ್ದಲ್ಲಿಂದ 2ನೇ ದಿನದಾಟ ಆರಂಭಿಸಿದ ಭಾರತ 130.5 ಓವರ್‌ಗೆ 445 ರನ್ ಗಳಿಸಿ ಆಲೌಟ್ ಆಯಿತು. ಪದಾರ್ಪಣೆ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವನ್ನಾಡಿದ ಧ್ರುವ್ ಜುರೆಲ್ 46 ರನ್ ಗಳಿಸುವ ಮೂಲಕ ಗಮನ ಸೆಳೆದರು. ಇದರೊಂದಿಗೆ ಆರ್. ಅಶ್ವಿನ್ 37 ರನ್ ಮತ್ತು ಜಸ್ಪ್ರೀತ್ ಬುಮ್ರಾ 26 ರನ್‌ಗಳ ಕೊಡುಗೆ ನೀಡಿದರು. ಇದರೊಂದಿಗೆ ಭಾರತ 445 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತ್ತು. ಇದನ್ನೂ ಓದಿ: ಟೆಸ್ಟ್‌ ಕ್ರಿಕೆಟ್‌ನಲ್ಲಿ 500 ವಿಕೆಟ್‌ – ಇತಿಹಾಸ ಬರೆದ ಸ್ಪಿನ್‌ ಮಾಂತ್ರಿಕ ಅಶ್ವಿನ್‌

2ನೇ ದಿನದಲ್ಲಿ ಮೊದಲ ಇನ್ನಿಂಗ್ಸ್‌ ಆರಂಭಿಸಿದ್ದ ಇಂಗ್ಲೆಂಡ್‌ ತಂಡದ ಪರ ಆರಂಭಿಕ ಆಟಗಾರ ಬೆನ್ ಡಕೆಟ್ ಬಿರುಸಿನ ಶತಕ ನೆರವಿನಿಂದ ಭಾರತಕ್ಕೆ ತಿರುಗೇಟು ನೀಡುವ ಸೂಚನೆ ನೀಡಿತ್ತು. 2ನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ಓವರ್‌ಗಳಲ್ಲಿ 35 ಓವರ್‌ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿತ್ತು. ಆರಂಭಿಕ ಆಟಗಾರ ಝಾಕ್ ಕ್ರಾವ್ಲಿನ್ 15 ರನ್, ಓಲೆ ಪೋಪ್ 39 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡಿದ್ದರು.  ಇದನ್ನೂ ಓದಿ: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ʻಚಿನ್ನʼ ಗೆದ್ದವರಿಗೆ 6 ಕೋಟಿ ರೂ. ಗಿಫ್ಟ್‌ – ಬೆಂಗ್ಳೂರಿಗೇ ಬರಲಿದೆ ʻಕ್ರೀಡಾ ನಗರʼ

ಸದ್ಯ 126 ರನ್‌ಗಳ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್‌ ಆರಂಭಿಸಿರುವ ಭಾರತ 16 ಓವರ್‌ಗಳಲ್ಲಿ 44 ರನ್‌ಗಳಿಗೆ 1 ವಿಕೆಟ್‌ ಕಳೆದುಕೊಂಡಿದೆ. ಒಟ್ಟು 170 ರನ್‌ಗಳ ಮುನ್ನಡೆ ಸಾಧಿಸಿದೆ. 19 ರನ್‌ಗಳಿಸಿದ್ದ ನಾಯಕ ರೋಹಿತ್‌ ಶರ್ಮಾ ಔಟಾಗಿದ್ದು, ಯಶಸ್ವಿ ಜೈಸ್ವಾಲ್‌, ಶುಭಮನ್‌ ಗಿಲ್‌ ಕ್ರೀಸ್‌ನಲ್ಲಿದ್ದಾರೆ.

ಡೆಕೆಟ್ ಬಿರುಸಿನ ಶತಕ: ಭಾರತ ನೀಡಿದ ಬೃಹತ್ ಮೊತ್ತವನ್ನು ಬೆನ್ನಟ್ಟಿದ್ದ ಆಂಗ್ಲರ ತಂಡಕ್ಕೆ ಡೆಕೆಟ್ ಬಲ ತುಂಬಿದ್ದರು. ಮೊದಲ ಇನ್ನಿಂಗ್ಸ್‌ನ 2ನೇ ದಿನದಾಟದಲ್ಲಿ ಬಿರುಸಿನ ಶತಕ ಬಾರಿಸುವ ಮೂಲಕ ಭಾರತದ ವಿರುದ್ಧ ಗೆಲುವಿನ ವಿಶ್ವಾಸ ಮೂಡಿಸಿದ್ದರು. ಇದನ್ನೂ ಓದಿ: ದಿಢೀರ್‌ ಮನೆಗೆ ತೆರಳಿದ ಅಶ್ವಿನ್‌ – 10 ಮಂದಿಯೊಂದಿಗೆ ಕಣಕ್ಕೆ ಇಳಿಯಲಿದೆ ಭಾರತ

ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಬೌಲಿಂಗ್‌ ಹಿಡಿತ ಸಾಧಿಸಿದ ಟೀಂ ಇಂಡಿಯಾ ಪರ ವೇಗಿ ಮೊಹಮ್ಮದ್‌ ಸಿರಾಜ್‌ 4 ವಿಕೆಟ್‌ ಪಡೆದರೆ, ರವೀಂದ್ರ ಜಡೇಜಾ ಮತ್ತು ಕುಲ್ದೀಪ್‌ ಯಾದವ್‌ ತಲಾ 2 ವಿಕೆಟ್‌ ಹಾಗೂ ಜಸ್ಪ್ರೀತ್‌ ಬುಮ್ರಾ, ರವಿಚಂದ್ರನ್‌ ಅಶ್ವಿನ್‌ ತಲಾ ಒಂದು ವಿಕೆಟ್‌ ಪಡೆದರು.